ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊಣ್ಣನ್ನ ನವರು ಟ್ರೋಫಿ ಅನಾವರಣ ಮಾಡಿದ ಸಂದರ್ಭ
ಸಿದ್ದಾಪುರ: ಫೈವ್ ಸ್ಟಾರ್ ಯುವಕ ಸಂಘದ ವತಿಯಿಂದ ಆಯೋಜಿಸಲಾದ ಕೂರ್ಗ್ ಚಾಂಪಿಯನ್ ಲೀಗ್ ಕ್ರಿಕೆಟ್ ಟೂರ್ನಮೆಂಟ್‌ಗೆ ಶಾಸಕ ಎ. ಎಸ್ ಪೊಣ್ಣನ್ನ ಶುಕ್ರವಾರ ಚಾಲನೆ ನೀಡಿದರು.
ಸಿದ್ದಾಪುರದ ಶಾಲಾ ಮೈದಾನದಲ್ಲಿ ಐದು ದಿನ ನಡೆಯುವ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರಿಕೆಟ್ ಇಂದು ನಾಡಿನ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ. ಯುವಜನರ ಜೀವನದ ಭಾಗವಾಗಿಬಿಟ್ಟಿದೆ. ಅನೇಕ ಯುವಕರು ತಮ್ಮ ಭವಿಷ್ಯವನ್ನು ಕ್ರಿಕೆಟ್ ಕ್ಷೇತ್ರದಲ್ಲಿ ಕಂಡುಕೊಳ್ಳುತ್ತಿದ್ದು, ಇಂತಹ ಟೂರ್ನಮೆಂಟ್‌ಗಳು ಗ್ರಾಮೀಣ ಭಾಗದ ಪ್ರತಿಭಾವಂತ ಆಟಗಾರರಿಗೆ ಉತ್ತಮ ಅವಕಾಶ ಒದಗಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಯುವಕರು ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ತೋರಬೇಕು. ಕ್ರೀಡೆ ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣ ಬೆಳೆಸುವ ಶಕ್ತಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ಪ್ರತೀಶ್, ಸಂಘದ ಪದಾಧಿಕಾರಿಗಳು, ವಿವಿಧ ತಂಡಗಳ ಆಟಗಾರರು ಹಾಗೂ ಕ್ರೀಡಾಭಿಮಾನಿಗಳು ಇದ್ದರು.