ಅಪಘಾತಗೆ ಒಳಗಾದ ಸ್ಕೂಟಿ ಡಿಕ್ಕಿ
ಸಿದ್ದಾಪುರ : ಆನಂದಪುರ ಸಮೀಪದ ಅಮ್ಮತ್ತಿ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಮ್ಮತ್ತಿ ಕಡೆಯಿಂದ ಗುರುವಾರ ರಾತ್ರಿ ನಡೆದು ಬರುತ್ತಿದ್ದ ಆನಂದಪುರ ನಿವಾಸಿ ಏನೋಸ್ ಮನೋಹರ್ (43) ಎಂಬವರಿಗೆ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ
ಅವರ ಮೇಲೆ ಹಿಂಬದಿಯಿಂದ ಬರುತ್ತಿದ್ದ ಕಾರೊಂದು ಹರಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ದ್ವಿಚಕ್ರ ವಾಹನ ಸವಾರ ನೆಲ್ಯಹುದಿಕೇರಿಯ ಹಂಸ ಅವರೂ ಈ ಸಂದರ್ಭ ತೀವ್ರವಾಗಿ ಗಾಯಗೊಂಡಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಡಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಪತ್ತೆಹಚ್ಚಲು ಶೋಧ ಕಾರ್ಯ ಮುಂದುವರಿದಿದೆ.