ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ನಡೆಯಿತು. ಪರಮೇಶ್ ಕುಮಾರ್, ಕೆ.ಸಿ. ಭೀಮಯ್ಯ, ಕೆ.ಎಸ್. ಕೃಷ್ಣೇಗೌಡ, ಶ್ರೀನಿವಾಸ್ ಮತ್ತಿತರರು ಇದ್ದರು.
ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಕುಶಾಲನಗರ ಪುರಸಭೆಯ ಸಭಾಂಗಣದಲ್ಲಿ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.
ಸಭೆಯ ಆರಂಭದಲ್ಲಿ ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ಅನುಷ್ಠಾನ ವರದಿ ಓದುವ ಮೂಲಕ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಯಿತು. ಯಾವ ಹಂತದಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿಗೆ ಕಾರ್ಯೊನ್ಮಖರಾಗಿರುತ್ತಾರೆ ಎಂಬುದರ ಬಗ್ಗೆ ಪರಿಶೀಲನೆ ಮಾಡಲಾಯಿತು.
ಕೆಲ ಇಲಾಖೆಯವರು ಹಿಂದಿನ ಸಭೆಯ ವಿಷಯಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಯೋಜನೆಯ ಕಾರ್ಯ ನಿರ್ವಹಿಸುವಂತೆ ಮತ್ತು ಯೋಜನೆ ಎಲ್ಲಾ ಪಲಾನುಭವಿಗಳಿಗೆ ದೊರಕುವಂತೆ ಕ್ರಮ ವಹಿಸಲು ಖಡಕ್ ಸೂಚನೆ ನೀಡಲಾಯಿತು.
ಗೃಹ ಲಕ್ಷ್ಮೀ ಯೋಜನೆಗೆ ಸಂಬAಧಿಸಿದAತೆ ಪಲಾನುಭವಿಗಳ ಬ್ಯಾಂಕ್ ಖಾತೆಯ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಮಾಹಿತಿಯನ್ನು ಪಡೆದು ಎಲ್ಲಾ ಮಹಿಳೆಯರಿಗೆ ಯೋಜನೆಯ ಸೌಲಭ್ಯ ಸಿಗುವಂತೆ ಕಾರ್ಯ ನಿರ್ವಹಿಸುವಂತೆ ಶಶಿಧರ್ ಸೂಚಿಸಿದರು. ಹಿಂದಿನ ಅನುಪಾಲನ ವರದಿಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯೊಂದಿಗೆ ಚರ್ಚೆಗಳು ನಡೆದವು.
ಈ ವೇಳೆ ಮಾತನಾಡಿದ ಶಶಿಧರ್ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಯುವ ನಿಧಿ ಯೋಜನೆಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜತೆಯಲ್ಲಿ ಯೋಜನೆಯನ್ನು ಎಲ್ಲಾ ಫಲಾನುಭವಿಗಳಿಗೆ ದೊರಕುವಂತೆ ಕರ್ತವ್ಯ ನಿರ್ವಹಿಸಬೇಕು ಎಂದರು. ಸಭೆಯಲ್ಲಿ ಹಾಜರಿದ್ದ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಪೂರಕವಾದ ಮಾಹಿತಿ ಸಂಗ್ರಹಿಸಿ, ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.
ಹೆಚ್ಚುವರಿ ಸಾರಿಗೆ ಸಂಪರ್ಕದ ವ್ಯವಸ್ಥೆ ಮತ್ತು ಯೋಜನೆಯಲ್ಲಿ ಪಲಾನುಭವಿಗಳು ಹೆಚ್ಚಾಗಿರುವ ಬಗ್ಗೆ, ಇನ್ನೂ ಬಾಕಿ ಇರುವ ಫಲಾನುಭವಿಗಳ ಸಂಖ್ಯೆಗಳ ಬಗ್ಗೆ ಹಾಜರಿದ್ದ ಅಧಿಕಾರಿಗಳೊಂದಿಗೆ ಸವಿಸ್ತಾರವಾದ ಚರ್ಚೆಗಳು ನಡೆದವು.
ಸೋಮವಾರಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ, ತಾಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣೇಗೌಡ, ಶ್ರೀನಿವಾಸ್, ಅಬ್ದುಲ್ ರಜಾಕ್, ರಫೀಕ್ ಖಾನ್, ಆದಂ, ಮಲ್ಲಿಕಾರ್ಜುನ, ಶ್ರೀನಿವಾಸ್, ಕಿಶೋರ್, ಮುಸ್ತಫಾ, ಹೆಬ್ಬಾಲೆ ಶೇಖರ್, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶ್ರೀದೇವಿ, ಸೆಸ್ಕ್ ಕಾರ್ಯಪಾಲಕ ಇಂಜಿನಿಯರ್ ಶ್ರೀನಿವಾಸ್, ಸಾರಿಗೆ ಇಲಾಖೆ ಅಧಿಕಾರಿ ಅಶೋಕ್, ಉದ್ಯೋಗ ವಿನಿಮಯ ಇಲಾಖೆಯ ಮಂಜುನಾಥ್ ಮತ್ತಿತರ ಅಧಿಕಾರಿಗಳು ಇದ್ದರು.