ವಾಟ್ಸ್‌ಆ್ಯಪ್ ಗುಂಪಿನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ರವಿ ಕಾಳಪ್ಪ, ರವಿ ಕುಶಾಲಪ್ಪ, ಸುವಿನ್ ಗಣಪತಿ ಇತರರಿದ್ದರು. 
ಕೊಡಗು

ವಾಟ್ಸ್‌ಆ್ಯಪ್ ಗುಂಪಿನ ವಿರುದ್ಧ ಕ್ರಮಕ್ಕೆ ಆಗ್ರಹ

ಆದರ್ಶ್. ಎಂ.ಕೆ.

ಪ್ರಮುಖ ಮುಖ್ಯಾಂಶಗಳು

  • ವಾಟ್ಸ್‌ಆ್ಯಪ್ ಗುಂಪಿನ ವಿರುದ್ಧ ಕ್ರಮಕ್ಕೆ ಆಗ್ರಹ
ಮಡಿಕೇರಿ: ವಾಯ್ಸ ಆಫ್ ಯುತ್ ಕೊಡಗು ಎಂಬ ವಾಟ್ಸ್‌ಆ್ಯಪ್ ಗುಂಪಿನಲ್ಲಿ ನಡೆಯುತ್ತಿರುವ ಕೆಲ ಚರ್ಚೆಗಳು ಸಮಾಜದಲ್ಲಿ ಅಶಾಂತಿ ಹಾಗೂ ಗಲಭೆಗೆ ಪ್ರಚೋದನೆ ನೀಡುವಂತಿದೆ ಎಂದು ಆರೋಪಿಸಿ, ಈ ಕುರಿತು ಸೂಕ್ತ ತನಿಖೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಮುಖಂಡರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಗುಂಪಿನಲ್ಲಿ ನಡೆಯುತ್ತಿರುವ ಚರ್ಚೆಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಇರುವುದರಿಂದ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ರೀತಿಯ ಪ್ರತಿಭಟನೆ ಅಥವಾ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಅಲ್ಲದೆ, ಸಂಬಂಧಪಟ್ಟ ವಾಟ್ಸ್‌ಆ್ಯಪ್ ಗುಂಪಿನ ಆಡ್ಮಿನ್‌ಗಳ ಪಾತ್ರವನ್ನು ತನಿಖೆಗೆ ಒಳಪಡಿಸಿ, ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಬಿಜೆಪಿ ವಕ್ತಾರ ರವಿ ಕುಶಾಲಪ್ಪ, ಪ್ರಮುಖರಾದ ಸುವಿನ್ ಗಣಪತಿ, ಹರಪಳ್ಳಿ ರವೀಂದ್ರ, ಉಮೇಶ್ ಸುಬ್ರಮಣಿ, ಎಡಿಕೇರಿ ಪ್ರಸನ್ನ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.