ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.
- ಫೆ.೧೦ರಂದು ಜಂತುಹುಳು ನಿವಾರಣ ಕಾರ್ಯಕ್ರಮ
- ೧,೩೧,೭೮೩ ಮಕ್ಕಳಿಗೆ ಮಾತ್ರೆ ವಿತರಣೆ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್
ಮಡಿಕೇರಿ: ಫೆ.೧೦ರಂದು ಜಂತುಹುಳು ನಿವಾರಣ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿರಾಜಪೇಟೆ ಮತ್ತು ಮಡಿಕೇರಿ ತಾಲೂಕಿನಲ್ಲಿ ನಿಗದಿತ ಗುರಿ ತಲುಪಿರುವುದಿಲ್ಲ. ಇದರ ಬಗ್ಗೆ ಹೆಚ್ಚಿನ ಗಮನ ಹರಿಸಿ ಎಲ್ಲಾ ಮಕ್ಕಳಿಗೂ ಎಲ್ಲಾ ನಿಗದಿತ ಲಸಿಕೆಗಳನ್ನು ನೀಡಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮ ಜಿಲ್ಲೆಯಲ್ಲಿ ಫೆ.೧೦ ರಂದು ನಡೆಯಲಿದ್ದು, ೧ ರಿಂದ ೧೯ ವ?ರ್ದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣೆಯ ಅಲ್ಪೆಂಡಜೋಲ್ ಮಾತ್ರೆ ವಿತರಿಸಬೇಕು. ಅರ್ಹ ಮಕ್ಕಳು ಇದರಿಂದ ಹೊರಗುಳಿಯಬಾರದು ಎಂದು ತಿಳಿಸಿದರು.
ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಅನುಷ್ಠಾನಕ್ಕೆ ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ್ ಮಾತನಾಡಿ, ಜಂತು ಹುಳು ಇರುವ ಮಕ್ಕಳು ಅಪೌಷ್ಠಿಕತೆ ಮತ್ತು ರಕ್ತಹೀನತೆಯಿಂದ ಬಳಲುತ್ತಾರೆ. ಆದರಿಂದ ಅವರ ದೈಹಿಕ, ಮಾನಸಿಕ ಬೆಳವಣಿಗೆ ಕುಂಠಿತವಾಗುವುದರೊಂದಿಗೆ ಶೈಕ್ಷಣಿಕ ಬೆಳವಣಿಗೆ ಸಹ ಕಡಿಮೆಯಾಗುವ ಕಾರಣದಿಂದ ಎಲ್ಲಾ ೧ ರಿಂದ ೧೯ ವ?ರ್ದ ಮಕ್ಕಳು ಜಂತು ಹುಳು ನಿವಾರಣೆ ಮಾತ್ರೆಗಳನ್ನು ತೆಗೆದುಕೊಳ್ಳಬೇಕು ಎಂದರು.
ಫೆ.೧೦ ರಂದು ಎಲ್ಲೆಡೆ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ(ಎನ್.ಡಿ.ಡಿ) ನಡೆಯಲಿದ್ದು, ಫೆ.೧೬ ರಂದು ಮಾಪ್ ಆಪ್ ದಿನ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ ೧-೫ ವ?ರ್ದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. ೬ ರಿಂದ ೧೯ ವ?ರ್ದ ಮಕ್ಕಳಿಗೆ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ, ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು ಒಂದರಿಂದ ಹತ್ತೊಂಬತ್ತು ವ?ರ್ದೊಳಗಿನ ಅಂಗನವಾಡಿ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಪಟ್ಟಿಯನ್ನು ತಯಾರಿಸಿ ಮನೆ ಮನೆಗೆ ಭೇಟಿ ನೀಡಿ ಮಾತ್ರೆ ನೀಡಲಿದ್ದಾರೆ ಎಂದು ಡಾ.ಮಧುಸೂದನ್ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ೧ ರಿಂದ ೨ ವರ್ಷದೊಳಗಿನ ಮಕ್ಕಳಿಗೆ ಅರ್ಧ ಅಲ್ಪೆಂಡಜೋಲ್ ಮಾತ್ರೆ ಹಾಗೂ ೨ ರಿಂದ ೧೯ ವರ್ಷದೊಳಗಿನ ಮಕ್ಕಳಿಗೆ ಒಂದು ಅಲ್ಪೆಂಡಜೋಲ್ ಮಾತ್ರೆ ನೀಡಬೇಕಿದೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಕಾರ ಅಗತ್ಯ ಎಂದು ಕೋರಿದರು.
ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ(ಎನ್‌ಡಿಡಿ) ಕೊಡಗು ಜಿಲ್ಲೆಯಲ್ಲಿ ೧ ರಿಂದ ೧೯ ವ?ರ್ದೊಳಗಿನ ಮಕ್ಕಳ ಗುರಿ ೧,೩೧,೭೮೩ ಹೊಂದಿದೆ. ಇದರಲ್ಲಿ ಅಂಗನವಾಡಿ ಮಕ್ಕಳು ೨೪,೪೦೮, ಅಂಗನವಾಡಿಯಿಂದ ಹೊರಗುಳಿದ ಮಕ್ಕಳು ೧,೪೪೮, ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು ೮೨,೨೩೨ ಹಾಗೂ ಪದವಿ ಪೂರ್ವ ತರಗತಿಯಲ್ಲಿ ೧೦,೭೬೦, ಹಾಗೆಯೇ ಪದವಿ ಕಾಲೇಜಿನ ೬,೫೧೭, ಐಟಿಐ/ಡಿಪ್ಲೋಮಾ ೨,೯೧೬ ವಿದ್ಯಾರ್ಥಿಗಳಿಗೆ ಮಾತ್ರೆಗಳನ್ನು ವಿತರಿಸಲು ಸಂಬಂಧಪಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಈಗಾಗಲೇ ನೀಡಲಾಗಿದೆ ಎಂದರು.
ಎನ್‌ಡಿಡಿ ಕಾರ್ಯಕ್ರಮಕ್ಕೆ ಅವಶ್ಯಕತೆಯಿರುವ ಅಲ್ಪೆಂಡಜೋಲ್ ೪೦೦ ಎಂ.ಜಿ ಮಾತ್ರೆಗಳನ್ನು ಈಗಾಗಲೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಖಾಂತರ ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ನಗರಸಭೆಯ ಅಧಿಕಾರಿಗಳು ಹಾಗೂ ಇತರೆ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.