ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಆವರಣದಲ್ಲಿ ದೀಪೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ದೇಗುಲದಲ್ಲಿ ದೀಪ ಬೆಳಗಲಾಯಿತು. 
ಕೊಡಗು

ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ದೀಪೋತ್ಸವ

ಕುಶಾಲನಗರ:
ಕೂಡಿಗೆಯ ಶ್ರೀ ಸತ್ಯನಾರಾಯಣ ವ್ರತಾಚರಣ ಸಮಿತಿಯ ವತಿಯಿಂದ ಲಕ್ಷ ದೀಪೋತ್ಸವದ ಅಂಗವಾಗಿ ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಆವರಣದಲ್ಲಿ ದೀಪೋತ್ಸವ ಕಾರ್ಯಕ್ರಮ ಬುಧವಾರ ರಾತ್ರಿ ಶ್ರಧ್ಧಾಭಕ್ತಿ, ವಿಶೇಷ ಪೂಜಾ ಕೈಂಕರ್ಯಗಳೊAದಿಗೆ ನಡೆದವು. ಲಕ್ಷ ದೀಪೋತ್ಸವದ ಅಂಗವಾಗಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಬೆಳಗ್ಗಿನಿಂದ ವಿಶೇಷ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಸಂಜೆ 7 ಗಂಟೆಗೆ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಟಾಟಾ ಕಾಫಿ ಸಂಸ್ಥೆಯ ಮ್ಯಾನೇಜರ್ ಕೆ.ಯು. ಸೋಮಯ್ಯ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಧಾರ್ಮಿಕ ಸಂಪ್ರದಾಯವನ್ನು ಉಳಿಸಿ ಬೆಳೆಸುವುದು ಬಹು ಮುಖ್ಯ ಎಂದರು.
ದೀಪೋತ್ಸವ ಅಂಗವಾಗಿ ಮಹಿಳೆಯರಿಗೆ ಏರ್ಪಡಿಸಿದ್ದ ಬಣ್ಣದ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ವ್ರತಾಚರಣ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಸಮಿತಿ ಸದಸ್ಯರು, ಹನುಮ ಸೇನ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಭಕ್ತರು ಭಾಗವಹಿಸಿದ್ದರು.