ನಂಜರಾಯಪಟ್ಟಣದ ಗ್ರಾಮ ಪಂಚಾಯಿತಿಗೆ ಸೇರಿದ ಕಟ್ಟಡದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಗಣ್ಯರು ಪಾಲ್ಗೊಂಡಿದ್ದರು. ಸಿ.ಎಲ್.ವಿಶ್ವ, ಕುಸುಮಾವತಿ, ಶೇಷಗಿರಿ, ರಾಜಶೇಖರ್, ಲೋಕನಾಥ್, ಗಿರಿಜಮ್ಮ, ಸಮೀರಾ ಇದ್ದರು.
- ಮಹಿಳೆಯರ ಸುರಕ್ಷತೆ, ಹಕ್ಕುಗಳ ಸಂರಕ್ಷಣೆ ಬಗ್ಗೆ ಚರ್ಚೆ
ಕುಶಾಲನಗರ : ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಗೆ ಸೇರಿದ ಕಟ್ಟಡದಲ್ಲಿ ಇತ್ತೀಚೆಗೆ ಮಕ್ಕಳ ಮತ್ತು ಮಹಿಳಾ ಗ್ರಾಮ ಸಭೆಯನ್ನು ಅಧ್ಯಕ್ಷ ಸಿ.ಎಲ್.ವಿಶ್ವ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.
ಸಭೆಯಲ್ಲಿ ಮಕ್ಕಳ ಹಕ್ಕುಗಳು ಹಾಗೂ ಅವುಗಳ ಸಂರಕ್ಷಣೆ ಹಾಗೂ ಕುಂದುಕೊರತೆಗಳ ಕುರಿತು ಚರ್ಚಿಸಲಾಯಿತು. ಇದರೊಂದಿಗೆ ಮಹಿಳೆಯರ ಸುರಕ್ಷತೆ, ಹಕ್ಕುಗಳ ಸಂರಕ್ಷಣೆ ಬಗ್ಗೆಯೂ ಚರ್ಚೆಗಳು ನಡೆಯಿತು.
ಸಭೆಯಲ್ಲಿ ಉಪಾಧ್ಯಕ್ಷೆ ಕುಸುಮಾವತಿ, ಕಾರ್ಯದರ್ಶಿ ಶೇಷಗಿರಿ, ಸದಸ್ಯರಾದ ಲೋಕನಾಥ್, ಸಮೀರ, ಗಿರಿಜಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್, ನಂಜರಾಯಪಟ್ಟಣ ಪ್ರೌಢಶಾಲಾ ಮತ್ತು ಸರಕಾರಿ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಶು ಇಲಾಖೆಯ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.