ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಅಂಗನವಾಡಿಗೆ ಆಯ್ಕೆಯಾದ ಕಾರ್ಯಕರ್ತೆಯರು ಹಾಗೂ ಸಹಾಯಕರು ಶಾಸಕ ಎ.ಎಸ್.ಪೊನ್ನಣ್ಣ ಆದೇಶ ಪತ್ರ ನೀಡಿದರು. ವಿನೋದ್ ನಾಣಯ್ಯ, ಸುಬೀರ್, ತುಳಸಿ ಗಾಂಧಿ ಪ್ರಸಾದ್ ಇತರರು ಇದ್ದರು.
ವಿರಾಜಪೇಟೆ: ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಪೊನ್ನಂಪೇಟೆ, ವಿರಾಜಪೇಟೆ, ಮಡಿಕೇರಿ ತಾಲೂಕು ಅಂಗನವಾಡಿಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಶುಕ್ರವಾರ ಶಾಸಕ ಎ.ಎಸ್. ಪೊನ್ನಣ್ಣ ತಮ್ಮ ಗೃಹ ಕಚೇರಿಯಲ್ಲಿ ಆದೇಶ ಪತ್ರ ವಿತರಿಸಿದರು.
25 ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ 34 ಅಂಗನವಾಡಿ ಸಹಾಯಕಿಯರಿಗೆ ಆದೇಶ ಪತ್ರ ನೀಡಿ ಮಾತನಾಡಿದ ಅವರು, ದೊರಕಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಿಡಿಪಿ ಅಧಿಕಾರಿಗಳು, ವಿನೋದ್ ನಾಣಯ್ಯ, ಸುಬೀರ್, ತುಳಸಿ ಗಾಂಧಿ ಪ್ರಸಾದ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.