ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್‌ನ ಸಭೆಯಲ್ಲಿ ಯು.ಹೆಚ್.ಉಮರ್, ಎಂ.ಎ.ನಾಸಿರ್, ಬಿ.ಎ.ಶಂಷುದ್ದೀನ್ ಇತರರಿದ್ದರು.  
ಕೊಡಗು

ಏ.೨೯ರಂದು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಪ್ರಮುಖ ಮುಖ್ಯಾಂಶಗಳು

  • ಏ.೨೯ರಂದು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ
ಮಡಿಕೇರಿ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್‌ನ ವತಿಯಿಂದ ಏ.೨೮ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಲಾಯಿತು.
ಮಡಿಕೇರಿಯಲ್ಲಿ ಇತ್ತೀಚೆಗೆ ನಡೆದ ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್‌ನ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಸಮ್ಮೇಳನದ ಅಂಗವಾಗಿ ಮಹಿಳೆಯರು, ಪುರುಷರು ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು.
ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್‌ನ ಉಪಾಧ್ಯಕ್ಷ ಎಂ.ಎ.ನಾಸಿರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಯು.ಹೆಚ್.ಉಮರ್ ಸಮ್ಮೇಳನದ ಸ್ವರೂಪ ಮತ್ತು ಕಾರ್ಯಕ್ರಮಗಳ ವಿವರ ನೀಡಿದರು. ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಬಿ.ಎ.ಶಂಷುದ್ದೀನ್ ಮಡಿಕೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಟ್ರಸ್ಟ್‌ನ ನಿಕಟಪೂರ್ವ ಅಧ್ಯಕ್ಷ ಎಸ್.ಪಿ.ಮುನೀರ್ ಅಹ್ಮದ್ ಸ್ವಾಗತಿಸಿದರೆ, ಅಬ್ದುಲ್ಲಾ ವಂದಿಸಿದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಮುಹಮ್ಮದ್ ಶರೀಫ್, ಪ್ರಮುಖರಾದ ಎಂ.ಯು.ಖಾಲಿದ್, ಅಬ್ದುಲ್ ರಹಿಮಾನ್, ಅಹ್ಮದ್ ಕಬೀರ್, ಅಶ್ರಫ್, ತಾಜುದ್ದೀನ್, ಕಲೀಂ ಅಹ್ಮದ್ ಉಪಸ್ಥಿತರಿದ್ದರು.