ಸಂಸದ ಯದುವೀರ್ ಅಧ್ಯಕ್ಷತೆಯಲ್ಲಿ ದಿಶಾ ಸಮಿತಿ ಸಭೆ ನಡೆಯಿತು. ಸುಜಾಕುಶಾಲಪ್ಪ, ಭೋಜೇಗೌಡ, ಆನಂದ್ ಪ್ರಕಾಶ್ ಮೀನಾ , ಅಭಿಷೇಕ್, ಸಹನಾ ಎಸ್. ಹಾದಿಮನಿ ಇದ್ದರು. 
ಕೊಡಗು

ಜಿಲ್ಲಾ ಅಭಿವೃದ್ಧಿ ಮತ್ತು ಸಮನ್ವಯ ಸಮಿತಿ ಸಭೆ

ಸುನಿಲ್ ಪೊನ್ನೇಟಿ
ಸಂಸದರಾದ ಯುದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ ಪಾರಂಪರಿಕ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು, ಅಮೃತ್ 2.0 ಯೋಜನೆ, ಜಲಜೀವನ್ ಅಭಿಯಾನ, ಸ್ವಚ್ಛ ಭಾರತ ಅಭಿಯಾನ, ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಣ ಹಾಗೂ ಕೃಷಿ ಚಟುವಟಿಕೆ ಸಂಬAಧ ಸುದೀರ್ಘ ಚರ್ಚೆ ನಡೆಯಿತು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯ ಆರಂಭದಲ್ಲಿ ಮಡಿಕೇರಿ ನಗರದ ಪಾರಂಪರಿಕ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಸಂಬAಧ ಈಗಾಗಲೇ ಹಲವು ಬಾರಿ ಚರ್ಚೆ ನಡೆದಿದ್ದು, ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ನಗರಸಭೆ ಪೌರಾಯುಕ್ತರಿಗೆ ಸಂಸದರು ನಿರ್ದೇಶನ ನೀಡಿದರು.
ಮಳೆ ಮತ್ತಿತರ ಕಾರಣ ನೀಡದೆ ಕೆಲಸ ಆಗಬೇಕು. ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಲಾಗಿದ್ದು, ಇನ್ನು ಯಾವುದೇ ಕಾರಣ ನೀಡಬಾರದು ಎಂದು ಸಂಸದರು ನಿರ್ದೇಶನ ನೀಡಿದರು.
ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಬೇರೆ ಬೇರೆ ಜಿಲ್ಲೆಯಲ್ಲಿ ಯಾವ ರೀತಿ ತ್ಯಾಜ್ಯ ವಿಲೇವಾರಿ ಮಾಡುತ್ತಾರೆ. ಅದನ್ನು ಸಹ ಗಮನಿಸಿ ಅದರಂತೆ ಕ್ರಮವಹಿಸಬೇಕು ಎಂದರು.
ಇದಕ್ಕೆ ಧ್ವನಿಗೂಡಿಸಿದ ವಿಧಾನಪರಿಷತ್ತು ಸದಸ್ಯರಾದ ಎಸ್.ಎಲ್.ಭೋಜೇಗೌಡ ಹಾಗೂ ಸುಜಾ ಕುಶಾಲಪ್ಪ ಅವರು ಅನುಪಾಲನಾ ವರದಿಯಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಸಬೂಬು ನೀಡುವಂತಿಲ್ಲ ಎಂದು ತಾಕೀತು ಮಾಡಿದರು.
ಈ ಕುರಿತು ದಿಶಾ ಸಮಿತಿ ಸದಸ್ಯರಾದ ಡಾ.ನವೀನ್ ಕುಮಾರ್, ಆರ್.ಕೆ.ಚಂದ್ರು, ನಾಗೇಶ್ ಕುಂದಲ್ಪಾಡಿ, ಕಾಂತಿ ಸತೀಶ್ ಅವರು ಧ್ವನಿಗೂಡಿಸಿದರು.
ನಾಗೇಶ್ ಕುಂದಲ್ಪಾಡಿ ಅವರು ಕೇಂದ್ರ ಸರ್ಕಾರದಿಂದ ಕಸವಿಲೇವಾರಿ, ಅಮೃತ್ 2.0 ಯೋಜನೆ, ಜೆಜೆಎಂ, ವಿಶ್ವಕರ್ಮ, ಸ್ವಚ್ಛಭಾರತ ಅಭಿಯಾನ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಇನ್ನಷ್ಟು ಮಾಹಿತಿ ನೀಡಬೇಕು. ಈ ಯೋಜನೆಗಳಿಗೆ ನಿರೀಕ್ಷೆಗೂ ಮೀರಿ ಅನುದಾನ ಬರುತ್ತಿದೆ. ಅನುಷ್ಠಾನ ಮಾಡಬೇಕಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.
ಈ ಕುರಿತು ಮಾತನಾಡಿದ ವಿಧಾನ ಪರಿಷತ್ತು ಸದಸ್ಯರಾದ ಸುಜಾ ಕುಶಾಲಪ್ಪ ಅವರು ಜಿಲ್ಲೆಯ ಹಲವು ಕಡೆ ರಸ್ತೆ ಬದಿ
ಕಸವನ್ನು ಬೀಸಾಡುತ್ತಿದ್ದಾರೆ. ಈ ಬಗ್ಗೆ ಗಮನಹರಿಸಬೇಕು ಎಂದರು.
ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲಿ ಕಸ ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಬೇಕು. ಈ ಬಗ್ಗೆ ವಿಶೇಷ ಆಸಕ್ತಿ ವಹಿಸಬೇಕು ಎಂದು ಸಲಹೆ ಮಾಡಿದರು.
ಜಿಲ್ಲೆಯ ಹೋಂಸ್ಟೇ ಮತ್ತು ರೆಸಾರ್ಟ್ಗಳಲ್ಲಿ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಕೇರಳ ಮತ್ತು ಅಸ್ಸಾಂನಲ್ಲಿ ತ್ಯಾಜ್ಯವನ್ನು ಸರಿಯಾದ ನಿರ್ವಹಣೆ ಮಾಡಲಾಗುತ್ತದೆ. ಆದರೆ ನಮ್ಮ ರಾಜ್ಯದಲ್ಲಿ ಯಥೇಚ್ಛವಾಗಿ ಕಂದಾಯ ಬರುತ್ತಿದ್ದರು ಸರಿಯಾದ ನಿರ್ವಹಣೆ ಕಾಣುತ್ತಿಲ್ಲ ಎಂದು ಸುಜಾ ಕುಶಾಲಪ್ಪ ಅವರು ಅತೃಪ್ತಿ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶೇ.100 ರಷ್ಟು ಕಸ ವಿಲೇವಾರಿಗೆ ಒತ್ತು ನೀಡಲಾಗಿದೆ. ಅಗತ್ಯವಿರುವ ಕಡೆಗಳಲ್ಲಿ ಡಸ್ಟ್ ಬಿನ್ ಇಡಲಾಗಿದೆ ಎಂದರು.
‘ಇದಕ್ಕೆ ಧ್ವನಿಗೂಡಿಸಿದ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ ಅವರು ಅಧಿಕಾರಿಗಳು ಶ್ರದ್ಧೆ ಹಾಗೂ ಬದ್ಧತೆಯಿಂದ ಕೆಲಸ ಮಾಡಿದಲ್ಲಿ ಸುಲಲಿತವಾಗಿ ಕರ್ತವ್ಯ ನಿರ್ವಹಿಸಬಹುದಾಗಿದೆ. ಆದರೆ ಕತೆ ಹೇಳುವುದನ್ನು ಬಿಡಬೇಕು. ಅಧಿಕಾರಿಗಳ ಕಥೆ ಕೇಳಿಕೊಂಡು ಹೋಗಲು ಬಂದಿಲ್ಲ. ಫಲಿತಾಂಶ ಅತೀ ಮುಖ್ಯ ಎಂದು ಕಿಡಿ ಕಾರಿದರು.’
ಈ ಕುರಿತು ಮಾತನಾಡಿದ ಸಂಸದರು ಕಸದ ವಿಚಾರಗಳು ಮುಂದಿನ ಸಭೆಗೆ ಬರಬಾರದು. ಈ ಬಗ್ಗೆ ಯೋಜನೆ ರೂಪಿಸಿ ವರದಿ ನೀಡುವಂತೆ ತಾಕೀತು ಮಾಡಿದರು.
ಆರ್.ಕೆ.ಚಂದ್ರು ಮಾತನಾಡಿ ಹಾಡಿಗಳಲ್ಲಿಯೂ ಸಹ ತ್ಯಾಜ್ಯ ವಿಲೇವಾರಿ ಸಂಬAಧ ಅರಿವು ಮೂಡಿಸಬೇಕು. ಸ್ವಚ್ಚತೆಗೆ ಆದ್ಯತೆ ನೀಡಬೇಕು ಎಂದರು.
ಅಮೃತ್ 2.0 ಯೋಜನೆಯಡಿ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸೋಮವಾರಪೇಟೆ ಮತ್ತು ಪೊನ್ನಂಪೇಟೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬAಧಿಸಿದAತೆ ಮಾಹಿತಿ ನೀಡಿದ ಎಂಜಿನಿಯರ್ ಜಯಕುಮಾರ್ ಅವರು 45 ಕೋಟಿ ರೂ. ವೆಚ್ಚದಲ್ಲಿ ಯೋಜನಾ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಶೇ.70 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಈ ಆರ್ಥಿಕ ವರ್ಷಕ್ಕೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ಅಮೃತ್ 2.0 ಯೋಜನೆ ಜಿಲ್ಲೆಯಲ್ಲಿ ಮತ್ತಷ್ಟು ಪ್ರಗತಿ ಸಾಧಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಸಂಸದರು ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಹೆಚ್ಚಾಗಿ ಮಳೆ ಬೀಳುವ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿರುವುದು ಬೇಸರ ತರಿಸುತ್ತದೆ. ಈ ವರ್ಷ ಮುಂಗಾರು ಆರಂಭ ಸರಿಯಾಗಿ ಮಳೆ ಆಗದಿದ್ದರೂ ಸಹ ಜಲಮೂಲವನ್ನು ಸಂರಕ್ಷಿಸುವಲ್ಲಿ ಮುಂದಾಗಬೇಕು. ಕೆರೆ, ಕಟ್ಟೆ, ಬಾವಿ, ಹಳ್ಳ, ಕೊಳ್ಳಗಳು ಹಾಗೂ ತೊರೆಗಳಲ್ಲಿ ನೀರು ಇದ್ದು, ಕುಡಿಯುವ ನೀರು ಪೂರೈಕೆಯಲ್ಲಿ ಟ್ಯಾಂಕರ್ ಬಳಸುವುದು ಸರಿಯಲ್ಲ ಎಂದರು.
ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗಿಲ್ಲ, ಮುಂದಿನ ದಿನಗಳಲ್ಲಿ ಮಳೆ ಆಗುವ ಸಾಧ್ಯತೆ ಇದ್ದು, ಕುಡಿಯುವ ನೀರು ಸಂರಕ್ಷಣೆಗೆ ಒತ್ತು ನೀಡಬೇಕು ಎಂದರು.
ಅಮೃತ್ 2.0 ಯೋಜನೆ ಪ್ರಗತಿ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ದಿಶಾ ಸಮಿತಿ ಸದಸ್ಯರಾದ ನಾಗೇಶ್ ಕುಂದಲ್ಪಾಡಿ ಅವರು ಒತ್ತಾಯಿಸಿದರು.
ಜಲಜೀವನ್ ಮಿಷನ್ ಯೋಜನೆ ಸಂಬAಧಿಸಿದAತೆ ಮಾಹಿತಿ ನೀಡಿದ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್ ಅವರು ಜಲಜೀವನ್ ಮಿಷನ್‌ಯಡಿ ಪ್ರತಿ ಮನೆಗೂ ನಲ್ಲಿ ನೀರು ಪೂರೈಸುವತ್ತ ಗಮನಹರಿಸಲಾಗಿದೆ ಎಂದರು.
ಭೋಜೇಗೌಡ ಅವರು ಜಲಜೀವನ್ ಮಿಷನ್ ಪ್ರಗತಿ ಯೋಜನೆ ಸಂಬAಧಿಸಿದAತೆ ಸ್ಥಳೀಯ ಪ್ರತಿನಿಧಿಗಳನ್ನು ಆಹ್ವಾನಿಸಿ ಮಾಹಿತಿ ನೀಡಬೇಕು. ಕಾಮಗಾರಿ ಪೂರ್ಣಗೊಂಡಿರುವ ನಂತರ ಸ್ಥಳೀಯರಿಗೆ ಮಾಹಿತಿ ನೀಡಬೇಕು ಎಂದರು.
ಈ ಕುರಿತು ಮಾತನಾಡಿದ ನಾಗೇಶ್ ಕುಂದಲ್ಪಾಡಿ ಅವರು ಕೇಂದ್ರ ಸರ್ಕಾರ ಅಮೃತ್ 2.0 ಯೋಜನೆ ಸಂಬAಧಿಸಿದAತೆ ಶೇ.10 ರಷ್ಟು ಪ್ರಗತಿ ಸಾಧಿಸಿಲ್ಲ. ಕಾಮಗಾರಿ ಪೂರ್ಣಗೊಂಡ ನಂತರ ಪಂಚನಾಮೆ ಆಗಬೇಕು. ಆದರೆ ಇದು ಯಾವುದೇ ಕೆಲಸ ಆಗಿಲ್ಲ ಎಂದು ದೂರಿದರು. ಜಲಜೀವನ್ ಮಿಷನ್ ಯೋಜನೆ ಸಂಬAಧಿಸಿದAತೆ ಮಾಹಿತಿ ತರಿಸಿಕೊಳ್ಳಲಾಗುವುದು ಎಂದರು.
ತಾ.ಪಂ.ಇಒಗಳು ಎಲ್ಲಾ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಈ ಯೋಜನೆ ಬಗ್ಗೆ ಮಾಹಿತಿ ಪಡೆಯಬೇಕು. ಕೇಂದ್ರ ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಅರ್ಹರಿಗೆ ತಲುಪಬೇಕು ಎಂದರು.
ಈ ಕುರಿತು ಮಾತನಾಡಿದ ಸಂಸದರು ಜನಪ್ರತಿನಿಧಿಗಳ ಸಮ್ಮುಖದಲ್ಲಿ ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ವರದಿ ನೀಡಿ, ಗ್ರಾಮ ಪಂಚಾಯಿತಿಗೆ ವರದಿ ನೀಡಬೇಕು ಎಂದರು.
ಉಪ ಅರಣ್ಯ ಸಂಕ್ಷಣಾಧಿಕಾರಿ ಅಭಿಷೇಕ್ ಅವರು ಮಾತನಾಡಿ ವನ್ಯಪ್ರಾಣಿಗಳ ಹಾವಳಿ ತಡೆಯುವಲ್ಲಿ ಪ್ರತೀ ಕಿ.ಮೀ.ಗೆ ಒಂದೂವರೆ ಕೋಟಿ ರೂ. ಬೇಕಾಗುತ್ತದೆ ಎಂದು ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ, ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಗೆ ಸಂಬAಧಿಸಿದAತೆ ಮಾಹಿತಿ ನೀಡಿದರು.