ನಶಾ ಮುಕ್ತ ಭಾರತ-ಸ್ವಾಸ್ಥ್ಯ ಭಾರತ ಹಾಗೂ ಅಂಗಾಂಗ ದಾನ ಅಭಿಯಾನಕ್ಕೆ ಡಾ.ಬಿ.ಸಿ.ಭಗವಾನ್ ಹಾಗೂ ಶಾಸಕ ಡಾ.ಮಂತರ್‌ಗೌಡ ಹಸಿರು ನಿಶಾನೆ ತೋರಿದರು.  
ಕೊಡಗು

ಮಡಿಕೇರಿಯಲ್ಲಿ ನಶಾ ಮುಕ್ತ ಭಾರತ ಜಾಗೃತಿ ಜಾಥಾ

ಪ್ರಮುಖ ಮುಖ್ಯಾಂಶಗಳು

  • ಮಡಿಕೇರಿಯಲ್ಲಿ ನಶಾ ಮುಕ್ತ ಭಾರತ ಜಾಗೃತಿ ಜಾಥಾ
  • ಮಾದಕ ವಸ್ತು ಮುಕ್ತ ಕ್ಯಾಂಪಸ್‌ಗಳಿಗೆ ಮಾತ್ರ ಮಾನ್ಯತೆ: ಡಾ.ಬಿ.ಸಿ.ಭಗವಾನ್
ಮಡಿಕೇರಿ: ನಗರದಲ್ಲಿ ಶನಿವಾರ ನಡೆದ ನಶಾ ಮುಕ್ತ ಭಾರತ-ಸ್ವಾಸ್ಥ್ಯ ಭಾರತ ಹಾಗೂ ಅಂಗಾಂಗ ದಾನ ಅಭಿಯಾನ(ಜೀವ ಸಾರ್ಥಕತೆ ಅಭಿಯಾನ)ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡರು.
ಇಲ್ಲಿನ ಗಾಂಧಿ ಮೈದಾನದಲ್ಲಿ ಕೊಡಗು ಜಿಲ್ಲಾಡಳಿತ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಕೊಡಗು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ದಿಶಾ ಭೋದ್ ಫೌಂಡೇಶನ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿದ್ಯವಿದ್ಯಾಲಯ ಸೇರಿದಂತೆ ಕಾಲೇಜುಗಳ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆದ ಈ ಅಭಿಯಾನದ ಜಾಥಾಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಸಿ.ಭಗವಾನ್ ಹಾಗೂ ಶಾಸಕ ಡಾ.ಮಂತರ್‌ಗೌಡ ಹಸಿರು ನಿಶಾನೆ ತೋರಿದರು.
ಜಾಥಾವು ನಗರದ ಗಾಂಧಿ ಮೈದಾನದಿಂದ ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತ, ಅಜ್ಜಮಾಡ ಬಿ.ದೇವಯ್ಯ ವೃತ್ತದ ಮೂಲಕ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ತಲುಪಿತು. ಅಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಕಲಾವಿದ ಇ.ರಾಜು ಮತ್ತು ತಂಡದವರಿಂದ ಬೀದಿನಾಟಕ ಪ್ರದರ್ಶಿಸಲಾಯಿತು.
ಇದಕ್ಕೂ ಮುನ್ನ ಮಾತನಾಡಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಸಿ.ಭಗವಾನ್, ಇನ್ನು ಮುಂದೆ ಮಾದಕ ವಸ್ತು ಮುಕ್ತ ಕ್ಯಾಂಪಸ್ ಎಂದು ಘೋ?ಣೆ ಮಾಡಿಕೊಂಡ ಕಾಲೇಜುಗಳಿಗೆ ಮಾತ್ರವೇ ಮಾನ್ಯತೆ ನೀಡಲು ನಿರ್ಧರಿಸಲಾಗಿದೆ. ಲಕ್ಷಾಂತರ ಮಂದಿ ಅಂಗಾಂಗಗಳಿಗಾಗಿ ಕಾಯುತ್ತಿದ್ದಾರೆ. ಆದರೆ, ಅಂಗಾಂಗ ದಾನ ಮಾಡುವವರ ಸಂಖ್ಯೆ ತೀರಾ ಕಡಿಮೆ ಇದೆ. ಅರಿವಿನ ಕೊರತೆಯಿಂದ ಅಮೂಲ್ಯ ಅಂಗಾಂಗಗಳು ಮಣ್ಣು ಪಾಲಾಗುತ್ತಿವೆ. ಹಾಗಾಗಿ, ಈ ಕುರಿತು ಜಾಗೃತಿ ಮೂಡಿಸಲೂ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರತಿ ವಿದ್ಯಾರ್ಥಿಗಳನ್ನೂ ಉಪನ್ಯಾಸಕರು ಈ ಮಾದಕದ್ರವ್ಯದಿಂದ ರಕ್ಷಿಸಿ, ತಮ್ಮ ಕ್ಯಾಂಪಸ್ ಅನ್ನು ಮಾದಕ ವಸ್ತು ಮುಕ್ತ ಕ್ಯಾಂಪಸ್ ಎಂದು ಘೋ?ಣೆ ಮಾಡಿಕೊಳ್ಳಬೇಕು. ಈ ರೀತಿ ಮಾಡಿದ ಕಾಲೇಜುಗಳಿಗೆ ಮಾತ್ರವೇ ನಾವು ಮಾನ್ಯತೆ ನೀಡುತ್ತೇವೆ ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಿ ಹೇಳಿದರು.
ದೇಶದಲ್ಲಿ ಶೇ.೩೦ರಿಂದ ೪೦ ರ?್ಟು ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಿ ತಮ್ಮ ಜೀವನವನ್ನೇ ಸಂಪೂರ್ಣ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದಕ್ಕಾಗಿಯೇ ಈ ಅಭಿಯಾನ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳೂ ಸಹ ಇನ್ನು ಮುಂದೆ ಎಚ್ಚರಿಕೆಯಿಂದಿರಬೇಕು. ಎಲ್ಲ ವಿದ್ಯಾರ್ಥಿಗಳನ್ನೂ ಪರೀಕ್ಷಿಸುತ್ತೇವೆ. ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ದೂರ ಇರಬೇಕು ಎಂದು ಕಿವಿಮಾತು ಹೇಳಿದರು.
೧೫೦೦ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜು ಹಾಗೂ ಇತರ ಸಂಸ್ಥೆಗಳು ಈ ವಿವಿ ವ್ಯಾಪ್ತಿಯಲ್ಲಿದ್ದು, ದೇಶಕ್ಕೆ ಮಾದರಿ ವಿವಿ ಎನಿಸಿದೆ. ಮಾತ್ರವಲ್ಲ, ಪ್ರಪಂಚದಲ್ಲಿಯೆ ಹೆಸರುವಾಸಿಯಾಗಿದೆ. ಇಂತಹ ವಿಶ್ವವಿದ್ಯಾಲಯ ಈಗ ನಶಾ ಮುಕ್ತ ಕ್ಯಾಂಪಸ್ ಆಗುವತ್ತ ದೃಢವಾದ ಹೆಜ್ಜೆ ಇರಿಸಿದೆ ಎಂದರು.
ಈಗ ಚಟ ಎಂಬುದು ಯುವ ಸಮುದಾಯವನ್ನು ಕಾಡುತ್ತಿದೆ. ಶೇ ೩೦-೪೦ರ?್ಟು ವಿದ್ಯಾರ್ಥಿಗಳು ಚಟಕ್ಕೆ ಒಳಗಾಗಿ ಅಧ್ಯಯನದಲ್ಲಿ ಹಿಂದೆ ಉಳಿಯುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಇದರ ದು?್ಪರಿಣಾಮಗಳ ಅರಿವು ಬರಬೇಕು ಅದಕ್ಕಾಗಿ ವಿವಿ ವ್ಯಾಪ್ತಿಯ ಪ್ರತಿ ಕಾಲೇಜಿನಲ್ಲಿ ನಶಾ ಮುಕ್ತ ಕ್ಯಾಂಪಸ್ ರಚಿಸುತ್ತಿದೆ. ಇದಕ್ಕಾಗಿ ಒಂದು ಕಾರ್ಯಪಡೆ ರಚಿಸುತ್ತಿದೆ. ಮಾತ್ರವಲ್ಲ, ನಶಾ ಮುಕ್ತ ಎಂದು ಘೋಷಿಸಿದ ಕಾಲೇಜಿಗೆ ಮಾತ್ರ ಮಾನ್ಯತೆ ನೀಡಲು ತೀರ್ಮಾನಿಸಲಾಗಿದೆ ಎಂದರು.
ಡಿಜಿಟಲ್ ಅಡಿಕ್ಷನ್ ಎಂಬುದು ಈಗ ಹೊಸ ಬಗೆಯ ಚಟವಾಗಿ ಪರಿಣಮಿಸಿದೆ. ಮಕ್ಕಳು ಮತ್ತು ಮಹಿಳೆಯರು ಹೆಚ್ಚು ಒಳಗಾಗಿದ್ದಾರೆ. ಅನೇಕ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ತಂತ್ರಜ್ಞಾನವನ್ನು ಜ್ಞಾನದ ಗಳಿಗೆಗಾಗಿ ಮಾತ್ರ ಬಳಸಬೇಕು. ಈ ಕುರಿತು ಪೋ?ಕರು ತಮ್ಮ ಮಕ್ಕಳ ಮೇಲೆ ನಿಗಾ ವಹಿಸಬೇಕು ಎಂದು ಹೇಳಿದರು.
ಅಂಗಾಂಗ ದಾನ ಶ್ರೇ?್ಠ ದಾನ. ಆದರೆ, ದಾನ ಮಾಡುವವರ ಸಂಖ್ಯೆ ಕಡಿಮೆ ಇದೆ. ಈಗ ನೋಂದಣಿ ಮಾಡಿದರೆ ಬ್ರೇನ್ ಡೆಡ್ ಆದಾಗ ಮಾತ್ರ ಅಂಗಾಂಗ ತೆಗೆದುಕೊಳ್ಳಲಾಗುತ್ತದೆ. ದೇಶದಲ್ಲಿ ೨-೩ ಲಕ್ಷ ಜನ ಅಂಗಾಂಗಗಳಿಗಾಗಿ ಕಾಯುತ್ತಿದ್ದಾರೆ. ಆದರೆ, ಕೇವಲ ೧೬-೧೭ ಸಾವಿರ ಜನ ಮಾತ್ರ ಅಂಗಾಂಗ ದಾನ ನೀಡುತ್ತಿದ್ದಾರೆ. ಈ ಸಂಖ್ಯೆ ಹೆಚ್ಚಬೇಕಿದೆ ಎಂದು ಹೇಳಿದರು. ಅಂಗಾಂಗ ದಾನ ಮತ್ತು ಮಾದಕವಸ್ತು ವಿರುದ್ಧ ಪ್ರತಿಜ್ಞಾ ವಿಧಿಯನ್ನು ಅವರು ವಿದ್ಯಾರ್ಥಿಗಳಿಗೆ ಬೋಧಿಸಿದರು.
ಶಾಸಕ ಡಾ.ಮಂತರ್‌ಗೌಡ ಅವರು ಮಾತನಾಡಿ, ಮಾದಕ ವಸ್ತುಗಳು ಕೇವಲ ವ್ಯಕ್ತಿಯನ್ನು ಮಾತ್ರ ಅಲ್ಲ, ಇಡೀ ಸಮಾಜವನ್ನೇ ಹಾಳು ಮಾಡುತ್ತದೆ. ನಮ್ಮಲ್ಲಿ ಉತ್ತಮವಾದ ಮಾನಸಿಕ ಅರೋಗ್ಯ ವಿಭಾಗ ಇದೆ. ಚಟದಿಂದ ಮುಕ್ತರಾಗಲು ಬಯಸುವವರು ಈ ವಿಭಾಗವನ್ನು ಸಂಪರ್ಕಿಸಬಹುದು ಎಂದು ಹೇಳಿದರು.
ಪದವಿಗಳಿಗಿಂತ ಮೌಲ್ಯ ಮುಖ್ಯ. ಉತ್ತಮ ಮೌಲ್ಯಯುತ ಬದುಕನ್ನು ಎಲ್ಲರೂ ನಡೆಸಬೇಕು. ಮಾದಕ ವಸ್ತುಗಳು ಕೇವಲ ವ್ಯಕ್ತಿಯನ್ನು ಮಾತ್ರ ಅಲ್ಲ ಇಡೀ ಸಮಾಜವನ್ನೇ ಹಾಳು ಮಾಡುತ್ತದೆ. ಚಟ ಬಿಡಿಸಲು ನಮ್ಮ ಆಸ್ಪತ್ರೆಯಲ್ಲಿ ಉತ್ತಮ ಮಾನಸಿಕ ಅರೋಗ್ಯ ವಿಭಾಗ ಇದೆ ಎಂದರು.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ವೃ?ಬ್ ಮಾತನಾಡಿ, ಮಾದಕವಸ್ತು ವ್ಯಸನ ಕುರಿತು ಸಹಾಯವಾಣಿ ೧೯೩೩ ನ್ನು ಸಂಪರ್ಕಿಸಬಹುದು ಎಂದರು.
ನಟಿ ಎಸ್.ಪಿ.ತೇಜಸ್ವಿನಿ ಶರ್ಮಾ ಸೇರಿದಂತೆ ನಗರದ ವಿವಿಧ ಶಾಲಾ, ಕಾಲೇಜುಗಳ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಅಭಿಯಾನದಲ್ಲಿ ಭಾಗವಹಿಸಿದ್ದು, ಜಾಥಾದಲ್ಲಿ ಪಾಲ್ಗೊಂಡಿದ್ದರು. ನಗರಸಭೆ ಅಧ್ಯಕ್ಷ ಪಿ.ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಿ.ವೈ.ರಾಜೇಶ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ.ಲೋಕೇಶ್, ಡಾ.ಮೋಹನ್ ಅಪ್ಪಾಜಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ, ಡಾ.ವಿಶಾಲ್ ಕುಮಾರ್, ಡಾ.ಸೋಮಶೇಖರ್, ಡಾ.ಧನಂಜಯ್, ಡಾ.ಸುಮುಖ್, ಇತರರು ಭಾಗವಹಿಸಿದ್ದರು.