ಗದ್ದೆಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿದರು. ವಿ.ಜಿ.ಲೋಕೇಶ್,
- ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿಕೆ
ಸುಂಟಿಕೊಪ್ಪ: ಸರ್ಕಾರಿ ಶಾಲೆಗಳ ಅವನತಿ ಮತ್ತು ಅದೋಗತಿಯ ಬಗ್ಗೆ ಸರ್ಕಾರದ ಶಿಕ್ಷಣ ನೀತಿಯ ಬದಲಾವಣೆಗಳು ಕಾರಣವಾಗಿದೆ ಎಂದು ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಹೇಳಿದ್ದಾರೆ.
ಶನಿವಾರ ಗದ್ದೆಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಂದು ಕಾಲದಲ್ಲಿ ವೈಭವದ ದಿನಗಳನ್ನು ಸರ್ಕಾರಿ ಶಾಲಾ ಕಾಲೇಜುಗಳು, ವಸತಿ ಶಾಲೆಗಳು ಮತ್ತು ವಸತಿ ನಿಲಯಗಳು ಕಂಡಿದ್ದವು. ಪ್ರಸ್ತುತ ದಿನಗಳಲ್ಲಿ ಖಾಸಗಿ ಶಾಲೆಗಳು ಮತ್ತು ಆಂಗ್ಲ ಮಾಧ್ಯಮ ವ್ಯಾಮೋಹದ ಹಿನ್ನೆಲೆಯಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಕೇಳುವವರು ಇಲ್ಲದಂತಾಗಿದೆ. ಇದಕ್ಕೆ ಕಾರಣ ಸರ್ಕಾರದ ಶಿಕ್ಷಣ ಇಲಾಖೆಯ ಸಮಂಜಸವಲ್ಲದ ನಿಯಮ ವಳಿಗಳು ಕಾರಣವಾಗಿದೆ ಎಂದು ಬೇಸರ ವ್ಯಕ್ತ ಪಡಿಸಿದರು.ಕೊಡಗು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎ.ಲೋಕೇಶ್‌ಕುಮಾರ್ ಜಿ.ಪಂ.ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಜಿ.ಪಂ.ಮಾಜಿ ಸದಸ್ಯ ಬಿ.ಬಿ.ಭಾರತೀಶ್ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಗ್ರಾಮ ಪಂಚಾಯಿತಿ
ಅಧ್ಯಕ್ಷರಾದ ಪಿ.ಆರ್.ಸುನಿಲ್‌ಕುಮಾರ್, ಮಾತನಾಡಿದರು.ಪಂಚಾಯಿತಿ ಅಭಿವೃದ್ದಿ ಅಧಿಕಾರಿ ವಿ.ಜಿ.ಲೋಕೇಶ್, ಪಂಚಾಯಿತಿ ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್,ಮಂಜುಳಾ,ಗೀತಾ, ನಾಗರತ್ನ ಸುರೇಶ್, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಎಸ್.ಎಸ್.ಇಂಟರ್
ನ್ಯಾಷನಲ್ ಮಾಲೀಕ ಸಿನಾನ್, ಸ್ಯಾಂಡಲ್‌ವುಡ್ ವ್ಯವಸ್ಥಾಪಕ ಪ್ರಸನ್ನಕುಮಾರ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಪ್ರಸನ್ನಕುಮಾರ್, ಸೋಮವಾರಪೇಟೆ ತಾಲೂಕು ಅಧ್ಯಕ್ಷರಾದ
ಟಿ.ಕೆ.ಬಸವರಾಜು, ಕಾಫಿ ಬೆಳೆಗಾರರಾದ ಪಟ್ಟೆಮನೆ ಉದಯಕುಮಾರ್, ಗ್ರಾ.ಪಂ.ಮಾಜಿ ಉಪಾಧ್ಯಕ್ಷೆ ಪಟ್ಟೆಮನೆ ನಳಿನಿ ಲೋಕೇಶ್,ಗೌರವಸಲಹೆಗಾರರಾದ ಬಲ್ಕಿಸ್,ವೈ.ಎಲ್.ಶ್ರೀರಾಮ್, ಗದ್ದೆಹಳ್ಳ, ವೈ.ಎಲ್.ಕೌಶಿಕ್, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಂ.ಎಸ್.ಸುನಿಲ್ ಇದ್ದರು.