ನಾಪೋಕ್ಲುವಿನ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಚಿಯಕ್ ಪೂಠಡ ಸತೀಶ್ ದೇವಯ್ಯ ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡರು.  
ಕೊಡಗು

ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉಪಾಧ್ಯಕ್ಷರಾಗಿ ಆಯ್ಕೆ

ನಾಪೋಕ್ಲು: ಇಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಚಿಯಕ್ ಪೂಠಡ ಸತೀಶ್ ದೇವಯ್ಯ ಅವರು ಆಯ್ಕೆಯಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡರು.
ಸ್ಥಳೀಯ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕುಡ್ಯೂಳಂಡ ಕವಿತಾ ಅವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಈ ಆಯ್ಕೆ ಮಾಡಲಾಯಿತು.
ಸಂಘದ ಅಧ್ಯಕ್ಷರಾಗಿರುವ ಕೇಟೋಳಿರ ಹರೀಶ್ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಎಲ್ಲರೂ ಒಪ್ಪಿಗೆಯಂತೆ ಚಿಯಕ್ ಪೂಠಡ ಸತೀಶ್ ದೇವಯ್ಯ ಅಧಿಕಾರ ವಹಿಸಿಕೊಂಡರು.
ಈ ಸಂದರ್ಭ ಸಂಘದ ಆಡಳಿತ ಅಧಿಕಾರಿ ಶೀವಚಾಳಿಯಂಡ ವಿಜು ಪೂಣಚ್ಚ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.