ಸಂತ ಅನ್ನಮ್ಮ ಕನ್ನಡ ಮಾಧ್ಯಮ ಶಾಲೆಯ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ದಲ್ಲಿ ನೃತ್ಯ ಮಾಡಿದ ಮಕ್ಕಳು.
- ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಆರ್. ರಾಜೇಶ್ ಸೂಚನೆ
ಸಿದ್ದಾಪುರ: ಸಂತ ಅನ್ನಮ್ಮ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ಶಾಲಾ ಸಭಾಂಗಣದಲ್ಲಿ ಸೋಮವಾರ ಅದ್ದೂರಿಯಾಗಿ ನೆರವೇರಿತು.
ವಿರಾಜಪೇಟೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೆ.ಆರ್.ರಾಜೇಶ್ ಮಾತನಾಡಿ, ಸರ್ಕಾರಿ ಶಾಲೆಗಳ ಜತೆಗೆ ಖಾಸಗಿ ಅನುದಾನಿತ ಶಾಲೆಗಳಿಗೂ ಸರ್ಕಾರದಿಂದ ಸೌಲಭ್ಯಗಳು ಲಭ್ಯವಿದ್ದು, ಪಾಲಕರು ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಸೇರಿಸಬೇಕು. ಮಾತೃಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿದರೆ ವಿಷಯದ ಗ್ರಹಿಕೆ ಹೆಚ್ಚಾಗಿ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಇಂಜಿನಿಯರ್ ಆಂಟೋನಿ ಜೋಸೆಫ್, ಶಾಲಾ ಶಿಕ್ಷಕಿ ಸುಜಾತಾ ಮಾತನಾಡಿದರು. ಶಾಲಾ ವ್ಯವಸ್ಥಾಪಕಿ ಸಿಸ್ಟರ್ ಮಾರ್ಜರಿ, ಸಿಬಿಎಸ್ಸಿ ವಿಭಾಗದ ಮುಖ್ಯ ಶಿಕ್ಷಕಿ ಲಿನೆಟ್, ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಅರ್ಪಿತಾ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮೇರಿ ರೆಜಿನಾ ಥೋಮಸ್ ಇದ್ದರು.