ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು. ಡಾ. ಕೆ.ಎಂ.ಭವಾನಿ , ಪ್ರೊ. ಎಂ.ಎಸ್ .ಭಾರತಿ , ಡಾ.ನಯನಾ ತಮ್ಮಯ್ಯ , ಮಾರಣ್ಣ , ಶಶಿಕಲಾ , ಭಾವನ ಅಭಿಷೇಕ್ ಇದ್ದರು.
- ವಿದ್ಯಾರ್ಥಿಗಳಿಗೆ ನಿವೃತ್ತ ಪ್ರಾಂಶುಪಾಲೆ ಡಾ. ಕೆ.ಎಂ ಭವಾನಿ ಕಿವಿಮಾತು
ವಿರಾಜಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜು ವಿಜ್ಞಾನ ಸಂಘ, ನೇಚರ್ ಕ್ಲಬ್ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಶನಿವಾರ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು.
ಪೊನ್ನಂಪೇಟೆ ಹಾಗೂ ಪಾಲಿಬೆಟ್ಟ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಡಾ. ಕೆ.ಎಂ ಭವಾನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಮಾಹಿತಿ ನೀಡಿ, ಕೃತಕ ಬುದ್ಧಿಮತ್ತೆಯ ಜತೆಗೆ ವಿಕಸಿತ ಭಾರತಕ್ಕೆ ಮಹಿಳಾ ವಿಜ್ಞಾನಿಗಳು ಯಾವ ರೀತಿ ಕೊಡುಗೆ ನೀಡಬಹುದು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ವಿದ್ಯಾರ್ಥಿಗಳು ಮೊಬೈಲ್ ಬಳಕೆಯಲ್ಲಿ ಹೆಚ್ಚು ಸಮಯ ವ್ಯರ್ಥ ಮಾಡದೆ, ಓದಿಗೆ ಪೂರಕವಾಗಿ ಮೊಬೈಲ್ ಬಳಸಿಕೊಂಡು, ಹೆಚ್ಚು ಪುಸ್ತಕಗಳನ್ನು ಓದುವ ಮೂಲಕ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು. ಈ ಮೂಲಕ ಭಾರತೀಯ ವಿಜ್ಞಾನ ಕ್ಷೇತ್ರಕ್ಕೆ ತಮ್ಮ ಕೊಡುಗೆ ಸಲ್ಲಿಸಬೇಕು ಎಂದರು.
ಈ ಸಂದರ್ಭ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾವೇರಿ ಕಾಲೇಜು ಉಪಪ್ರಾಂಶುಪಾಲೆ ಪ್ರೊ.ಎಂ. ಎಸ್. ಭಾರತಿ, ಐ ಕ್ಯೂ ಎ ಸಿ ಸಂಚಾಲಕಿ ಡಾ. ನಯನಾ ತಮ್ಮಯ್ಯ, ಕಾರ್ಯಕ್ರಮ ಸಂಚಾಲಕ ಡಾ. ಎನ್. ಎಸ್.ಅಭಿಷೇಕ್ , ವಿಜ್ಞಾನ ವಿಭಾಗದ ಉಪನ್ಯಾಸಕರಾದ ಡಾ. ಮಾರಣ್ಣ, ಶಶಿಕಲಾ, ಭಾವನ ಇನ್ನಿತರರು ಇದ್ದರು.