ವಿಶೇಷಚೇತನರ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರಾಜೇಶ್ ಚಾಲನೆ ನೀಡಿದರು. ರವೀಂದ್ರ ರೈ, ಅಜಯ್ ಸೂದ್ ಇದ್ದರು. 
ಕೊಡಗು

ವಿಶೇಷಚೇತನರಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ

ಸುನಿಲ್ ಪೊನ್ನೇಟಿ
ಮಡಿಕೇರಿ:
ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಕೊಡಗು ಶಾಖೆ, ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಹಾಗೂ ಸಮುದಾಯದ ಸಹಭಾಗಿತ್ವದೊಂದಿಗೆ ವಿಶೇಷಚೇತನರಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಮಂಗಳವಾರ ನಡೆಯಿತು. ಇಲ್ಲಿನ ಬಾಲ ಭವನ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರಾಜೇಶ್ ಉದ್ಘಾಟಿಸಿದರು. ನಂತರ ಮಾತಾನಾಡಿದ ಅವರು ಪ್ರತಿಯೊಬ್ಬ ವ್ಯಕ್ತಿಯೂ ಈ ತರಬೇತಿಯ ಉಪಯೋಗ ಪಡೆದು, ಜೀವನದಲ್ಲಿ ಆರ್ಥಿಕ ಸ್ವಾವಲಂಬಿಯಾಗಬೇಕೆAದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೊಡಗು ಶಾಖೆಯ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ ರವೀಂದ್ರ ರೈ ಮಾತನಾಡಿ ಎಸ್.ವಿ.ವೈ.ಎಂ. ಸಂಸ್ಥೆಯಿAದ ಉತ್ತಮ ಕಾರ್ಯಕ್ರಮಗಳನ್ನು ವಿಶೇಷಚೇತನರಿಗೆ ನೀಡುತ್ತಿದ್ದು, ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಸಹಕಾರ ಯಾವಾಗಲೂ ಇರುತ್ತದೆ. ಈ ಮೂರು ದಿನಗಳ ತರಬೇತಿಯನ್ನು ಎಲ್ಲರೂ ಪಡೆದು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆಯ ಸಲಹಾ ಸಮಿತಿ ಸದಸ್ಯ ಅಜಯ್ ಸೂದ್ ವಹಿಸಿದ್ದರು. ಈ ತರಬೇತಿ ಕಾರ್ಯಕ್ರಮದಲ್ಲಿ 32 ವಿಶೇಷಚೇತನರು ಮತ್ತು ಆರೈಕೆದಾರರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್.ವಿ.ವೈ.ಎಂ. ಸಂಸ್ಥೆಯ ಕೊಡಗು ಶಾಖೆಯ ಕಾರ್ಯಕ್ರಮ ವ್ಯವಸ್ಥಾಪಕ ಅಂಕಾಚಾರಿ, ರವಿಕಿರಣ್ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.