ಮಡಿಕೇರಿ ರಾಜಾಸೀಟ್ 
ಕೊಡಗು

ರಾಜಾಸೀಟ್‌ಗೆ ಪ್ರವೇಶ ನಿಷೇಧ

ಸುನಿಲ್ ಪೊನ್ನೇಟಿ
ಮಡಿಕೇರಿ:
ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಡಿಕೇರಿಯ ರಾಜಾಸೀಟ್‌ಗೆ ಗುರುವಾರದಿಂದ (ಜು. 9) ಭಾನುವಾರ (ಜು 12) ತನಕ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ. ರಾಜಾ ಸೀಟ್ ಬಳಿ ವಾಹನ ನಿಲುಗಡೆಯನ್ನೂ ನಿರ್ಬಂಧಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮಡಿಕೇರಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಬಳಿ ಭೂ ಕುಸಿತ ಉಂಟಾಗ್ತಿದೆ. ಈ ಹಿನ್ನೆಲೆಯಲ್ಲಿ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಕಡೆಯಿಂದ ಹೊರಹೋಗುವ ಎಲ್ಲಾ ವಾಹನಗಳು ರಾಜಾ ಸೀಟ್ ರಸ್ತೆಯನ್ನು ಬಳಸಿ ಸಂಚರಿಸುತ್ತಿವೆ. ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿರುವ ಕಾರಣ ಮತ್ತು ರಾಜಾ ಸೀಟ್ ಬಳಿ ಸಾರ್ವಜನಿಕರು ಮತ್ತು ಪ್ರವಾಸಿಗರ ವಾಹನ ನಿಲುಗಡೆಗೊಳಿಸುತ್ತಿರುವ ಕಾರಣ ಸಂಚಾರ ವ್ಯವಸ್ಥೆಗೆ ಅಡಚಣೆ ಉಂಟಾಗುತ್ತಿದೆ. ಅಲ್ಲದೆ ರಾಜಾ ಸೀಟ್ ಬಳಿ ಜನದಟ್ಟಣೆ ಹೆಚ್ಚಾಗಿರುವುದರಿಂದ ಆಗಾಗ್ಗೆ ಸಂಚಾರಕ್ಕೆ ಅಡಚಣೆಯಾಗುವುದು ಕಂಡುಬAದಿದೆ. ವಾರಾಂತ್ಯದಲ್ಲಿ ಪ್ರವಾಸಿಗರು ಹೆಚ್ಚಾಗಿ ಆಗಮಿಸುವುದರಿಂದ ಹಾಗೂ ಬಸ್‌ಸ್ಟ್ಯಾಂಡ್ ಮಾರ್ಗವಾಗಿ ಸಂಚರಿಸುವ ವಾಹನಗಳು ರಸ್ತೆ ಕುಸಿತದಿಂದ ಪ್ರಸ್ತುತ ರಾಜಾ ಸೀಟ್ ಮಾರ್ಗವಾಗಿ ಸಂಚರಿಸುತ್ತಿರುವುದರಿAದ ರಾಜಾ ಸೀಟ್ ರಸ್ತೆಯಲ್ಲಿ ವಾಹನಗಳ ನಿಲುಗಡೆ ಮತ್ತು ವಾಹನಗಳ ಸಂಚಾರ ಅಧಿಕವಾಗುವ ಸಾಧ್ಯತೆ ಇರುತ್ತದೆ. ಅಲ್ಲದೆ ರಾಜಾ ಸೀಟ್ ರಸ್ತೆಯಲ್ಲಿ ಶಾಲೆಯಿದ್ದು, ವಾಹನಗಳ ಅಧಿಕ ಸಂಚಾರ ಮತ್ತು ನಿಲುಗಡೆಯಿಂದ ಶಾಲಾ ಮಕ್ಕಳಿಗೆ ತೊಂದರೆಯಾಗುವ ಸಾಧ್ಯತೆ ಹೆಚ್ಚಾಗಿಗಿರುತ್ತದೆ. ಈ ಹಿನ್ನೆಲೆಯಲ್ಲಿ ಅಡಚಣೆ ನಿವಾರಿಸಲು ಮತ್ತು ಸಾರ್ವಜನಿಕರು ಹಾಗೂ ಸಾರ್ವಜನಿಕ ಆಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರಾಜಾ ಸೀಟ್ ಬಳಿ ವಾಹನ ನಿಲುಗಡೆ ಮತ್ತು ರಾಜಾ ಸೀಟ್ ಗೆ ಸಾರ್ವಜನಿಕರು, ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇದಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.