ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೊಡಗು ವಿದ್ಯಾಲಯದ ಮಕ್ಕಳು ಗಿಡಗಳನ್ನು ನೆಟ್ಟು ಸಂಭ್ರಮಿಸಿದರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೊಡಗು ವಿದ್ಯಾಲಯದಲ್ಲಿ ಶುಕ್ರವಾರ ವಿವಿಧ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.
ಕೊಡಗು ವಿದ್ಯಾಲಯದ ಎನ್‌ಸಿಸಿ ಘಟಕ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಪ್ರಾಂಶುಪಾಲೆ ಕೆ. ಎಸ್. ಸುಮಿತ್ರಾ, ಆಡಳಿತ ವ್ಯವಸ್ಥಾಪಕ ಪಿ. ರವಿ, ಡಿಆರ್‌ಎಫ್‌ಒ ಸುನಿಲ್ ಮತ್ತು ಅವರ ತಂಡದ ಸಮ್ಮುಖದಲ್ಲಿ ಉಕ್ಕುಡದ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಸಸಿಗಳನ್ನು ನೆಡಲಾಯಿತು.
ವಿದ್ಯಾರ್ಥಿಗಳು ಉತ್ಸಾಹದಿಂದ ವಿವಿಧ ಜಾತಿಯ ಸಸಿಗಳನ್ನು ನೆಟ್ಟು, ಅವುಗಳ ಸಂರಕ್ಷಣೆ ಹಾಗೂ ಪೋಷಣೆಯ ಜವಾಬ್ದಾರಿಯನ್ನು ಅರಿತುಕೊಂಡರು. ಈ ಕಾರ್ಯಕ್ರಮ ಪರಿಸರ ಸಂರಕ್ಷಣೆಯ ಮಹತ್ವ ತಿಳಿಸುವುದರ ಜತೆಗೆ, ಪ್ರಕೃತಿಯ ಬಗ್ಗೆ ಕಾಳಜಿ ಮತ್ತು ಜವಾಬ್ದಾರಿಯ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿತು. ಎನ್‌ಸಿಸಿ ಕೆಡೆಟ್‌ಗಳು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಮರಗಳ ಮಹತ್ವ, ಮಾಲಿನ್ಯ ನಿಯಂತ್ರಣ ಹಾಗೂ ಸ್ವಚ್ಛತೆಯ ಕುರಿತು ಆಕರ್ಷಕ ಮತ್ತು ಸಂದೇಶಪೂರಿತ ಪೋಸ್ಟರ್‌ಗಳನ್ನು ರಚಿಸಿ ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಿದರು. ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.