ಕುಶಾಲನಗರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಆವರಣದಲ್ಲಿ ವಿಶೇಷ ಘಟಕ ಯೋಜನೆ ಅಡಿ ನಡೆದ ಕಂಸಾಳೆ ನೃತ್ಯ ತರಬೇತಿ ಕಾರ್ಯಗಾರವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕಿ ನಿರ್ಮಲ ಮಠಪತಿ ಉದ್ಘಾಟಿಸಿದರು. ಲೋಕೇಶ್ ಸಾಗರ್, ಎಂ.ಎನ್. ಚಂದ್ರಮೋಹನ್, ಕುಮಾರ್. ವಿದ್ವಾನ್ ಶಂಕರಯ್ಯ, ಎನ್.ಕೆ. ಮೋಹನ್ ಕುಮಾರ್ ಮತ್ತಿತರರು ಇದ್ದರು.
ಪ್ರತಿಯೊಬ್ಬರೂ ವೃತ್ತಿಯೊಂದಿಗೆ ಕಲೆಗಳ ಬಗ್ಗೆಯೂ ಆಸಕ್ತಿ ಹೊಂದುವAತಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕಿ ನಿರ್ಮಲ ಮಠಪತಿ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ, ಸಹಯೋಗದೊಂದಿಗೆ ಕುಶಾಲನಗರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಆವರಣದಲ್ಲಿ ವಿಶೇಷ ಘಟಕ ಯೋಜನೆ ಅಡಿ ಗುರುವಾರ ನಡೆದ ಕಂಸಾಳೆ ನೃತ್ಯ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಕಲೆಗೆ ಗೌರವ ನೀಡುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ಪ್ರಕೃತಿಯ ಆರಾಧನೆ, ಹಬ್ಬ ಹರಿದಿನಗಳಲ್ಲಿ ಮನರಂಜನೆಗಾಗಿ ಜಾನಪದ ಹಾಡುಗಳನ್ನು ಹಾಡುವ ಮೂಲಕ ಕಲೆಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಆಗಬೇಕಾಗಿದೆ. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಆರು ತಿಂಗಳ ಕಾಲ ಕಂಸಾಳೆ ನೃತ್ಯ ತರಬೇತಿ ಕಾರ್ಯಗಾರ ನಡೆಯಲಿದೆ. ವಾರದಲ್ಲಿ ಮೂರು ದಿನಗಳು ತರಬೇತಿ ನಡೆಯುವುದು. ವಿದ್ಯಾರ್ಥಿಗಳು ಈ ಕಾರ್ಯಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ವಾರ್ಡನ್ ಎಂ.ಎಸ್. ಮಧು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಸಿರಿ ಸ್ನೇಹ ಬಳಗದ ಲೋಕೇಶ್ ಸಾಗರ್, ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್. ವಿದ್ವಾನ್ ಶಂಕರಯ್ಯ, ಮಕ್ಕಳ ಕಲಾ ಮೇಳದ ಸಂಘಟಕ ಎನ್.ಕೆ. ಮೋಹನ್ ಕುಮಾರ್, ಕಲಾ ಶಿಕ್ಷಕ ಎಂ.ಎಸ್. ಶಂಕರ್, ಕಲಾವಿದ ಗೋವಿಂದ ನಾಯಕ, ನಿವೃತ್ತ ಅಧಿಕಾರಿ ಮಣಜೂರು ಮಂಜುನಾಥ್ ಮತ್ತಿತರರು ಇದ್ದರು.