ನಾಪೋಕ್ಲು ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ರಾಜ್ಯಪಾಲರ ಬೇಟಿ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ನ ಜಿಲ್ಲಾ ಗವರ್ನರ್ ಕುಡುಪಿ ಅರವಿಂದ ಶೆಣೈ ಪಾಲ್ಗೊಂಡು ಮಾತನಾಡಿದರು.
ಲಯನ್ಸ್ ಕ್ಲಬ್ ಜಿಲ್ಲಾ ಪ್ರಾಂತಪಾಲ ಕುಡುಪಿ ಅರವಿಂದ ಶೆಣೈ ಸಲಹೆ
ನಾಪೋಕ್ಲು: ಲಯನ್ಸ್ ಕ್ಲಬ್ಬಿನ ಸದಸ್ಯರು ದೇಶದ ಜವಾಬ್ದಾರಿಯುತ ಪ್ರಜೆಗಳಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಲಯನ್ಸ್ ಕ್ಲಬ್‌ನ ಜಿಲ್ಲಾ ಪ್ರಾಂತಪಾಲ ಕುಡುಪಿ ಅರವಿಂದ ಶೆಣೈ ಹೇಳಿದರು.
ಸ್ಥಳಿಯ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಸಹಯೋಗದಲ್ಲಿ ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ರಾಜ್ಯಪಾಲರ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ನಮ್ಮ ಗಳಿಕೆಯ ಒಂದು ಅಂಶವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸಬೇಕು. ಸಮಾಜ ಸೇವೆ ಲಯನ್ಸ್ ಕ್ಲಬ್ ಸದಸ್ಯರ ಧ್ಯೇಯೋದ್ದೇಶವಾಗಬೇಕು ಎಂದರು
ನಾಪೋಕ್ಲು ಲಯನ್ಸ್ ಕ್ಲಬ್ ಹಾಗೂ ಪಿರಿಯಾಪಟ್ಟಣ ಲಯನ್ಸ್ ಘಟಕಗಳು ಉತ್ತಮ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ ಎಂದು ಶ್ಲಾಘಿಸಿದರು.
ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಮಾದೆಯಂಡ ಬಿ.ಕುಟ್ಟಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ. ಶೈಲಾ ಭೀಮಯ್ಯ ಪ್ರಾರ್ಥನೆ, ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ಧ್ವಜವಂದನೆ ನೆರವೇರಿಸಿದರು. ಕೇಟೋಳಿರ ರತ್ನಾ ಚರ್ಮನ ಅತಿಥಿಗಳ ಪರಿಚಯ ಮಾಡಿದರು.
ಲಯನ್ ಪ್ರಾಂತ್ಯ ಅಧ್ಯಕ್ಷ ಕೋಟೆರ ಡಾ.ಪಂಚಂ ತಿಮ್ಮಯ್ಯ, ಲಯನ್ಸ್ ವಲಯ ಅಧ್ಯಕ್ಷರಾದ ಬಿಂದು ಗಣಪತಿ, ಚೆಟ್ಟಿಮಾಡ ಟಿ. ಅಪ್ಪಣ್ಣ , ಪಿರಿಯಾಪಟ್ಟಣ ಲಯನ್ಸ್ ಅಧ್ಯಕ್ಷ ಜೆ.ಗಿರೀಶ್, ಸಹ ಕಾರ್ಯದರ್ಶಿ ಸುಮನ್ ಬಾಲಚಂದ್ರ, ನಾಪೋಕ್ಲು ಲಯನ್ಸ್ ಕ್ಲಬ್ ಕಾರ್ಯದರ್ಶಿ ಅಪ್ಪಚೆಟ್ಟೋಳಂಡ ಬನ್ಸಿ ಭೀಮಯ್ಯ, ಖಜಾಂಚಿ ಅಪ್ಪಚೆಟ್ಟೋಳಂಡ ವಸಂತ ಮುತ್ತಪ್ಪ , ಎಸ್.ಆನಂದ್, ಲಿಯೋಕ್ಲಬ್ ಅಧ್ಯಕ್ಷೆ ಕನ್ನಿಕಾ ಹಾಗೂ ವಿವಿಧ ಲಯನ್ಸ್ ಕ್ಲಬ್‌ಗಳ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.