ವಿರಾಜಪೇಟೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಲಯಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಗ್ಗಳದ ವಿದ್ಯಾರ್ಥಿಗಳೊಂದಿಗೆ ಮುಖ್ಯಶಿಕ್ಷಕಿ ಸುಜಾತಾ, ಸಹ ಶಿಕ್ಷಕರಾದ ನಾಜಿರಾ, ಸುಮಯಾ, ಸಪ್ನಾ, ಗಂಗಾ ಇದ್ದರು.
ವಿರಾಜಪೇಟೆ: ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ವಲಯಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಗ್ಗಳದ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಬಹುಮಾನ ಗೆದ್ದಿದ್ದಾರೆ.
ವಿದ್ಯಾರ್ಥಿಗಳ ವಿಭಾಗದಲ್ಲಿ ಕಬಡ್ಡಿ ದ್ವಿತೀಯ ಸ್ಥಾನ, ಖೋ ಖೋ ಆಟದಲ್ಲಿ ಪ್ರಥಮ ಸ್ಥಾನ ಪಡೆದರೆ, ವಿದ್ಯಾರ್ಥಿನಿಯರ ತಂಡ ಖೋ ಖೋ ಆಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ಹಾಗೆಯೇ 200 ಮೀಟರ್ ಓಟದಲ್ಲಿ ಲೋಹಿತ್ ತೃತೀಯ , 100 ಮೀಟರ್ ಓಟದಲ್ಲಿ ಸ್ಟೆನಿಲ್ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಸುಜಾತಾ, ಸಹ ಶಿಕ್ಷಕರಾದ ನಾಜಿರಾ, ಸುಮಯಾ, ಸಪ್ನಾ, ಗಂಗಾ ಉಪಸ್ಥಿತರಿದ್ದರು.