ಕೊಡಗರಹಳ್ಳಿ ಗ್ರಾಮದಲ್ಲಿರುವ ಶ್ರೀ ಬೈತೂರಪ್ಪ ಪೊವ್ವೆದಿ ಬಸವೇಶ್ವರ ದೇವಾಲಯದಲ್ಲಿ ಚಂದ್ರಮಾನ ಯುಗಾಯ ಪ್ರಯುಕ್ತ ವಿಶೇಷಪೂಜೆ ನಡೆಯಿತು.
ಸುಂಟಿಕೊಪ್ಪ: ಕೊಡಗರಹಳ್ಳಿ ಗ್ರಾಮದಲ್ಲಿರುವ ಶ್ರೀ ಬೈತೂರಪ್ಪ ಪೊವ್ವೆದಿ ಬಸವೇಶ್ವರ ದೇವಾಲಯದಲ್ಲಿ ಚಂದ್ರಮಾನ ಯುಗಾದಿಯನ್ನು ಗುರುವಾರದಂದು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.
ಪೂರ್ವಾಹ್ನ ಪಂಚಾಗ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಿತು. ಪೂಜಾ ಕಾರ್ಯಕ್ರಮಗಳನ್ನು ದೇವಾಲಯದ ಪ್ರಧಾನ ಆರ್ಚಕ ರಾಘವೇಂದ್ರ ಭಟ್, ಸಹಾಯಕರಾಗಿ ನರಸಿಂಹ ಭಟ್ ಮತ್ತು ಪ್ರಸನ್ನ ಭಟ್ ನೇರವೇರಿಸಿದರು.
ದೇವಾಲಯದ ಟ್ರಸ್ಟ್ ಅಧ್ಯಕ್ಷ ಕೆ.ಎನ್.ಪೂಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್, ಖಜಾಂಜಿ ಎ.ಬಿ.ತಮ್ಮಯ್ಯ, ದೇವಾಲಯದ ತಕ್ಕರಾದ ಜಗ್ಗರಂಡ ಹ್ಯಾರಿ ಕಾರ್ಯಪ್ಪ ಟ್ರಸ್ಟಿಗಳಾದ ಎಂ.ಎಸ್.ಸುರೇಶ್ ಚಂಗಪ್ಪ, ಎಂ.ಎ.ಬೋಪಯ್ಯ, ಎ.ಎಂ.ಸನ್ನಿ ಕಾರ್ಯಪ್ಪ, ಕೆ.ಎಸ್.ಮಂಜುನಾಥ್, ಸಿ.ಎನ್.ದತ್ತ ಸೋಮಣ್ಣ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.