ಕುಶಾಲನಗರ ಸಮೀಪದ ಕೂಡುಮಗಳೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ ಸೇನಾ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನವನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ , ಶಿಕ್ಷಕರಾದ ದಯಾನಂದ ಪ್ರಕಾಶ್, ಗೋಪಾಲಕೃಷ್ಣ, ಕೆ.ಟಿ.ಸೌಮ್ಯಾ, ರಮ್ಯಾ, ರೇಖಾ ಇದ್ದರು. 
ಕೊಡಗು

ಮಹಾದಂಡನಾಯಕನಿಗೆ ಪುಷ್ಪನಮನ

ಕುಶಾಲನಗರ: ಕುಶಾಲನಗರ ತಾಲೂಕಿನ ಕೂಡುಮಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ಘಟಕ, ವಿದ್ಯಾರ್ಥಿ ಸಂಘ ಹಾಗೂ ಎಸ್‌ಡಿಎಂಸಿ ಸಮಿತಿಯ ಆಶ್ರಯದಲ್ಲಿ ಬುಧವಾರ ಭಾರತದ ಸೇನಾ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನ ಆಚರಿಸಲಾಯಿತು.
ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕೆ.ಎಂ.ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಸೇನಾ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ ಕುರಿತು ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಗೈಡ್ಸ್ ಶಿಕ್ಷಕಿ ಕೆ.ಟಿ.ಸೌಮ್ಯಾ, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಡಿ.ರಮ್ಯಾ, ಬಿ.ಎನ್. ಸುಜಾತಾ, ಅನ್ಸಿಲಾ ರೇಖಾ, ಸಿಬ್ಬಂದಿ ಎಂ. ಉಷಾ ಇದ್ದರು.