ಕಕ್ಕಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಾಕಿ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿ ಪ್ರಶಸ್ತಿ ಪಡೆದಿದ್ದಾರೆ. ಶಾಲೆಯ ಆಡಳಿತ ಮಂಡಳಿಯವರು, ಶಿಕ್ಷಕ ವೃಂದದವರು ಇದ್ದಾರೆ. 
ಕೊಡಗು

ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ

ನಾಪೋಕ್ಲು: ಇಲ್ಲಿಗೆ ಸಮೀಪದ ಕಕ್ಕಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಾಕಿ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಗೋಣಿಕೊಪ್ಪದಲ್ಲಿ ಲಯನ್ಸ್ ಸಂಸ್ಥೆಯು ಆಯೋಜಿಸಿದ 6(ಎ) ಸೈಡ್ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ದ್ವಿತೀಯ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿ ಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯವರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.