ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ತಲುಪಿಸುವ ಬಗ್ಗೆ ನಡೆದ ಕಾರ್ಯಾಗಾರವನ್ನು ಕೇಂದ್ರ ಬುಡಕಟ್ಟು ಮಂತ್ರಾಲಯದ ಅಧಿಕಾರಿ ಗಿರಿಧರ್ ಉದ್ಘಾಟಿಸಿದರು. ನೆಹರು, ಸೆಂಥಿಲ್ ಕುಮಾರ್, ಗೋಪಾಲ್, ಎಸ್.ಹೊನ್ನೆಗೌಡ, ಶೇಖರ್, ಅಪ್ಪಣ್ಣ ಮತ್ತಿತರರು ಇದ್ದರು. 
ಕೊಡಗು

ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆ ತಲುಪಿಸಬೇಕು

ಮಡಿಕೇರಿ:
ಹಲವು ದಶಕಗಳಿಂದ ಅರಣ್ಯ ಅಥವಾ ಸರ್ಕಾರಿ ಭೂಮಿ ಅನುಭವಿಸಿಕೊಂಡು ಬಂದಿರುವ ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಹೆಚ್ಚಿನ ಕಾಳಜಿಯಿಂದ ತಲುಪಿಸುವಂತಾಗಬೇಕು ಎಂದು ಕೇಂದ್ರ ಬುಡಕಟ್ಟು ಮಂತ್ರಾಲಯದ ಅಧಿಕಾರಿ ಗಿರಿಧರ್ ಹೇಳಿದರು. ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ತಲುಪಿಸುವ ಬಗ್ಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.
ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳ ಮಾನ್ಯ ಮಾಡುವ ಸಂಬAಧ 2006, 2007 ಮತ್ತು 2008 ನಿಯಮ ಮತ್ತು ತಿದ್ದುಪಡಿಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ, ಆದಿವಾಸಿಗಳಿಗೆ ಸೌಲಭ್ಯಗಳನ್ನು ತಲುಪಿಸಬೇಕು. ಗ್ರಾಮ ಮಟ್ಟದಲ್ಲಿನ ಅಧಿಕಾರಿಗಳು ಅರ್ಹ ಬುಡಕಟ್ಟು ಜನಾಂಗದವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸೌಲಭ್ಯ ತಲುಪಿಸಬೇಕು. ಯಾವುದೇ ಕಾರಣಕ್ಕೂ ಸತಾಯಿಸಬಾರದು. ಇತರರಂತೆ ಬದುಕಲು ಅವಕಾಶ ಮಾಡಬೇಕು. ಗ್ರಾಮ ಅರಣ್ಯ ಸಮಿತಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪ ವಿಭಾಗ ಮಟ್ಟದ ಸಮಿತಿ ಮತ್ತು ಜಿಲ್ಲಾ ಮಟ್ಟದ ಸಮಿತಿಗಳ ಸದಸ್ಯರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಸಂಬAಧಿಸಿದ ಅಧಿಕಾರಿ ಅರಣ್ಯ ಹಕ್ಕು ಕಾಯ್ದೆಗೆ ಸಂಬAಧಿಸಿದAತೆ ಅಧ್ಯಯನ ಮಾಡಿ ಕಾರ್ಯಕ್ರಮ ಜಾರಿಗೆ ಮುಂದಾಗಬೇಕು. ಜಿಲ್ಲೆಯಲ್ಲಿ ಸೋಲಿಗ, ಜೇನುಕುರುಬ ಬೆಟ್ಟಕುರುಬ, ಕಾಡುಕುರುಬ, ಎರವ, ಪಣಿಯ, ಕುಡಿಯ, ಮಲೆಕುಡಿಯ, ಹೀಗೆ ಹಲವು ಆದಿವಾಸಿ ಕುಟುಂಬಗಳು ಇಂದಿಗೂ ಸಹ ಕಷ್ಟದಲ್ಲಿ ಬದುಕುತ್ತಿದ್ದು, ಅಗತ್ಯ ಸೌಲಭ್ಯ ಕಲ್ಪಿಸಬೇಕಾಗಿದೆ ಎಂದು ಹೇಳಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ನೆಹರು, ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಸೆಂಥಿಲ್ ಕುಮಾರ್, ಗೋಪಾಲ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೆಗೌಡ, ತಾ.ಪಂ.ಇಒ ಶೇಖರ್, ಅಪ್ಪಣ್ಣ, ತºಸೀಲ್ದಾರ್ ಶ್ರೀಧರ್, ಆರ್‌ಎಫ್‌ಓಗಳು, ಪಿಡಿಓಗಳು, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿಗಳು ಇದ್ದರು.