ಪೊನ್ನಂಪೇಟೆ ತಾಲೂಕಿನ ಕುಟ್ಟದಲ್ಲಿ ನೂತನವಾಗಿ ನಿರ್ಮಾಣವಾದ ಪರಿಶಿಷ್ಟ ಪಂಗಡ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ತೀತಿರ ಧರ್ಮಜ ಉತ್ತಪ್ಪ, ಮಿದೇರಿರ ನವೀನ್, ಕಾಳಿಮಾಡ ಪ್ರಶಾಂತ್, ಬಾನಂಡ ಪ್ರತ್ಯು ಇದ್ದರು.  
ಕೊಡಗು

ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಮಾದರಿಯಾಗಿ

ವಿದ್ಯಾರ್ಥಿಗಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಕರೆ

ವಿರಾಜಪೇಟೆ: ಸಮಾಜದಲ್ಲಿ ಮುನ್ನೆಲೆಗೆ ಬರಲು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಮಹತ್ವಾಕಾಂಕ್ಷೆಯಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿನಿಲಯ ಕಟ್ಟಡವನ್ನು ಎಲ್ಲರೂ ಸದುಪಯೋಗ ಪಡಿಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಿ ಸಮಾಜಕ್ಕೆ ಮಾದರಿಯಾಗಬೇಕೆಂದು ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದರು.
ಪೊನ್ನಂಪೇಟೆ ತಾಲೂಕಿನ ಕುಟ್ಟದಲ್ಲಿ ನೂತನವಾಗಿ ನಿರ್ಮಾಣವಾದ ಪರಿಶಿಷ್ಟ ಪಂಗಡ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಶನಿವಾರ ಲೋಕಾರ್ಪಣೆಗೊಳಿಸಿ ಮಾತನಾಡಿ, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರನಾಗಿ ನಾನು ಇದ್ದ ಸಂದರ್ಭ ಶಾಸಕರು ಇಲ್ಲಿಯ ವಸತಿ ಶಾಲೆಯ ನೂತನ ಕಟ್ಟಡಕ್ಕೆ 3.23 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಒದಗಿಸಿದ್ದರು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಜಿಪಂ ಮಾಜಿ ಸದಸ್ಯರಾದ ಬಾನಂಡ ಪ್ರತ್ಯು, ವಲಯ ಅಧ್ಯಕ್ಷ ರಾಮಕೃಷ್ಣ, ಐಟಿಡಿಪಿ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.