ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್ ಡಿ ಎಂಸಿ ಪ್ರಶಸ್ತಿಗೆ ಆಯ್ಕೆ ಆದ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ
ಅತ್ಯುತ್ತಮ ಎಸ್ ಡಿ ಎಂಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ಶಾಲೆ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯವೈಖರಿಯನ್ನು ಪರಿಗಣಿಸಿ 2025-26ನೇ ಸಾಲಿಗೆ ಸಂಬAಧಿಸಿದAತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೀಡುವ ನೀಡುವ ಅತ್ಯುತ್ತಮ ಜಿಲ್ಲಾಮಟ್ಟದ ಪ್ರಶಸ್ತಿ ಇದಾಗಿದೆ.
ಮಕ್ಕಳ ಭವಿಷ್ಯವನ್ನು ಸೃಷ್ಟಿಸುತ್ತಿರುವ ಈ ಶಾಲೆ 1916ರಲ್ಲಿ ಪ್ರಾರಂಭವಾದರೂ 1927ರಲ್ಲಿ ಸರ್ಕಾರದ ಮಾನ್ಯತೆಯೊಂದಿಗೆ ಶಾಲೆ ನಡೆದು ಬಂದು ಕಳೆದ ಅವಧಿಯಲ್ಲಿ ಶತಮಾನೋತ್ಸವ ಆಚರಿಸಿಕೊಂಡಿದೆ. ಶಾಲೆ ಪ್ರಾರಂಭದಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ದಾಖಲೆ ಹೊಂದಿತ್ತು. ಪ್ರಸ್ತುತ ಒಂದರಿAದ ಎಂಟನೇ ತರಗತಿಯನ್ನು ಉನ್ನತೀಕರಿಸಿದ ಶಾಲೆಯಾಗಿ 324 ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.
ಮುಖ್ಯ ಶಿಕ್ಷಕ ಸೇರಿದಂತೆ 15 ಸಹ ಶಿಕ್ಷಕರು ಇದ್ದಾರೆ. ಸುಸಜ್ಜಿತವಾದ 28 ಕೊಠಡಿಗಳನ್ನು ಹೊಂದಿದೆ. 2.40 ಎಕರೆ ವಿಸ್ತೀರ್ಣದಲ್ಲಿ ಮಕ್ಕಳ ಕಲಿಗೆ ಅನುಕೂಲಕರವಾದ ವಾತಾವರಣವನ್ನು ಕಟ್ಟಿ ಕೊಡಲಾಗಿದೆ. 2015 ರಿಂದ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲಾಗಿದ್ದು, ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಯುಕೋ ಕ್ಲಬ್, ಚಿತ್ರಕಲಾ ಸಂಘ, ವಿಜ್ಞಾನ ಸಂಘ, ಕ್ರೀಡಾ ಸಂಘಗಳು ಕ್ರಿಯಾಶೀಲವಾಗಿವೆ. ತಂತ್ರಜ್ಞಾನದ ಬಳಕೆಯಲ್ಲಿ ಮುಂದುವರಿದಿದ್ದು, ಪ್ರೊಜೆಕ್ಟರ್, ಕಂಪ್ಯೂಟರ್ ಉಪಯೋಗಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿಸಲಾಗುತ್ತಿದೆ.
ಗ್ರಂಥಾಲಯ, ಪ್ರಯೋಗಾಲಯ, ಕರಾಟೆ, ಯೋಗ, ನೃತ್ಯ, ಕ್ರೀಡೆ ಸೆರಿದಂತೆ ಮಕ್ಕಳಿಗೆ ಹಲವಾರು ಕಾರ್ಯಕ್ರಮಗಳನ್ನು ಉಚಿತವಾಗಿ ನೀಡಲಾಗುತ್ತಿದೆ.
ಪ್ರಶಸ್ತಿ ಸಂಭ್ರಮವನ್ನು ಹಂಚಿಕೊAಡ ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಮಾತನಾಡಿ, ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ, ಹಿರಿಯ ವಿದ್ಯಾರ್ಥಿಗಳ ಸಂಘ ಮತ್ತು ಸ್ಥಳೀಯ ದಾನಿಗಳ ಸಾಕಾರದೊಂದಿಗೆ ಶಾಲೆಯ ಸ್ವರೂಪವನ್ನೇ ಬದಲಾಯಿಸಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲಾಗಿದೆ. ಶಾಲೆಯ ವಾತಾವರಣದಲ್ಲಿ ಮತ್ತಷ್ಟು ಸೃಜನಶೀಲತೆಯನ್ನು ತರುವ ಪ್ರಯತ್ನಕ್ಕೆ ಸಮಿತಿ ಕಾರ್ಯನ್ಮೂಕವಾಗಿದೆ ಎಂದು ತಿಳಿಸಿದರು.
ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ ಕುಮಾರ್ ಮಾತನಾಡಿ, ಶಾಲೆಯಲ್ಲಿನ ಸಮರ್ಪಕ ನಿರ್ವಹಣೆಯ ಹಿನ್ನೆಲೆಯ ಜೊತೆಗೆ ಸ್ಥಳೀಯ ದಾನಿಗಳು ಮತ್ತು ಪಂಚಾಯತಿಯ ಸಹಕಾರದೊಂದಿಗೆ ಬಹುತೇಕವಾಗಿ ಶಾಲೆಯ ವಾತಾವರಣವನ್ನು ಕಲಿಕೆಯ ಪ್ರಯೋಗಕ್ಕೆ ವಿಸ್ತರಿಸಲಾಗಿದೆ.
ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಒದಗಿಸಿಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಥಳೀಯ ದಾನಿಗಳ ಸಹಕಾರ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಸಹಕಾರ ಬಹು ಪ್ರಾಮುಖ್ಯತೆ ಪಡೆದುಕೊಂಡಿದೆ. ಶಾಲೆಯನ್ನು ಮತ್ತಷ್ಟು ಮಕ್ಕಳ ಕಲಿಕೆಯ ಕಡೆ ಕೊಂಡೊಯ್ಯುವ ಚಿಂತನೆ ಹೊಂದಲಾಗಿದೆ ಎಂದು ಹೇಳಿದರು.