ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ನಡೆದ ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಮಕ್ಕಳ ಸಾಂಸ್ಕೃತಿಕ ಪ್ರದರ್ಶನ ಗಮನ ಸೆಳೆಯಿತು. 
ಕೊಡಗು

ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ಗ್ರಾಜುಯೇಷನ್ ಡೇ

ಮಡಿಕೇರಿ:
ನಗರದ ಹೊಸಬಡಾವಣೆಯಲ್ಲಿ ಇರುವ ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ ಬುಧವಾರ ನಡೆಯಿತು. ದೀಪ ಹಿಡಿದು ಯು.ಕೆ.ಜಿ ಮಕ್ಕಳು ತಮ್ಮ ಗ್ರಾಜುಯೇಷನ್ ಡೇಯನ್ನು ಸಂಭ್ರಮಿಸಿದರು. ಒಳ್ಳೆಯ ಪ್ರಜೆಯಾಗಿ ಸಮಾಜಕ್ಕೆ ಮಾದರಿ ವ್ಯಕ್ತಿಯಾಗುವನೆಂಬ ಪ್ರತಿಜ್ಞೆಯೊಂದಿಗೆ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು.
ಸಮಾರಂಭದ ಮುಖ್ಯ ಅತಿಥಿ ನಗರಸಭಾ ಸದಸ್ಯೆ ನೆರವಂಡ ಅನಿತಾ ಪೂವಯ್ಯ ಮಾತನಾಡಿ, ವಿದ್ಯಾರ್ಥಿಗಳಿಗೆ ಭವಿಷ್ಯದ ಬಗೆ ಧನಾತ್ಮಕ ಚಿಂತನೆ ್ನ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಅಧ್ಯಕ್ಷೀಯ ಭಾಷಣದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಎಂ. ನಾಣಯ್ಯ, ಮಕ್ಕಳನ್ನು ಮೊಬೈಲ್ ಮಾಯಾಜಾಲದಿಂದ ದೂರವಿಡಬೇಕೆಂದು ಸಲಹೆ ನೀಡಿದರು.
ಶಾಲೆಯ ಪ್ರಾಂಶುಪಾಲೆ ರಶ್ಮಿದೀಪ ಎನ್. ಟಿ. ಟಿ ಪ್ರತಿಕ್ಷಣಾರ್ಥಿಗಳಿಗೆ ಪ್ರಮಾಣಪತ್ರ ನೀಡಿದರು. ವಿದ್ಯಾರ್ಥಿಗಳಿಂದ ಸಿದ್ಧಾರ್ಥನಿಂದ ಬುದ್ಧನೆಡೆU' ಎಂಬ ಕಿರುನಾಟಕ ಪ್ರದರ್ಶಿಸಲಾಯಿತು. ಆಸೆಯೇ ದು:ಖಕ್ಕೆ ಮೂಲ ಎಂಬ ಗೌತಮಬುದ್ಧನ ತತ್ವವನ್ನು ಮನಮುಟ್ಟುವಂತೆ ವಿದ್ಯಾರ್ಥಿಗಳು ಅಭಿನಯಿಸಿದರು.
ಶಾಲೆಯ ಆಡಳಿತ ಮಂಡಳಿ ಸದಸ್ಯರು,, ಶಿಕ್ಷಕರು ಹಾಗೂ ಪೋಷಕರು ಇದ್ದರು.