ಸೋಮವಾರಪೇಟೆ ಸಮೀಪದ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಆಯೋಜಿಸಿದ್ದ ಸಮಗ್ರ ತೋಟಗಾರಿಕೆ ಮಾಹಿತಿ ಕಾರ್ಯಕ್ರಮದಲ್ಲಿ ಆತ್ಮ ಯೋಜನೆಯ ತಾಂತ್ರಿಕ ವ್ಯವಸ್ಥಾಪಕರಾದ ಶಾರದಾ ಮಾತನಾಡಿದರು. ರಾಜೇಶ್, ಲಲಿತ, ಹರೀಶ್ ಕುಮಾರ್ ಇತರರು ಇದ್ದರು.  
ಕೊಡಗು

ಸಮಗ್ರ ಕೃಷಿ ಅಳವಡಿಸಿಕೊಂಡರೆ ಅಧಿಕ ಲಾಭ

ಪ್ರಮುಖ ಮುಖ್ಯಾಂಶಗಳು

  • * ಶಾಂತಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ರಾಜೇಶ್ ಸಲಹೆ
ಸೋಮವಾರಪೇಟೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಸಮಗ್ರ ತೋಟಗಾರಿಕೆ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ಆಯೋಜಿಸಲಾಗಿತ್ತು.
ಶಾಂತಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ರಾಜೇಶ್ ಮಾತನಾಡಿ, ರೈತರು ಸಮಗ್ರ ಕೃಷಿ ಅಳವಡಿಸಿಕೊಂಡು ಕೃಷಿ ಮಾಡಿದರೆ ಅಧಿಕ ಲಾಭಗಳಿಸಬಹುದು ಎಂದು ಅಭಿಪ್ರಾಯ ಪಟ್ಟರು.
ಆತ್ಮ ಯೋಜನೆಯ ತಾಂತ್ರಿಕ ವ್ಯವಸ್ಥಾಪಕಿ ಶಾರದಾ ಮಾತನಾಡಿ, ಪ್ರತಿಯೊಬ್ಬರೂ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ಮುಂಚೆ ಮಣ್ಣು ಪರೀಕ್ಷೆ ಮಾಡಿಸುವಂತೆ ತಿಳಿಸಿದರು. ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಬಿ.ಬಿ. ಲಲಿತಾ ವಹಿಸಿದ್ದರು. ಕೃಷಿ ಮೇಲ್ವಿಚಾರಕ ಹರೀಶ್ ಕುಮಾರ್, ಲೇಖಕಿ ಪ್ರಿಯಾ, ಕೃಷಿ ಸಖಿ ಕಾವ್ಯಾ, ಸೌಮ್ಯಾ, ರೋಹಿಣಿ ಇದ್ದರು.