ನಾಪೋಕ್ಲು ಸಮೀಪದ ಸಂಪಾಜೆಯಲ್ಲಿ ವಿದ್ಯುತ್ ಪ್ರಸರಣ ಕೇಂದ್ರದ ಸ್ಥಾಪನೆಗೆ ಶಾಸ ಎ.ಎಸ್.ಪೊನ್ನಣ್ಣ ಮಂಗಳವಾರ ನೆರವೇರಿಸಿದರು. ರಮಾದೇವಿ ಕಳಗಿ, ಶೌಕತ್ ಆಲಿ, ವಿಜಯ್ ಕನ್ಯಾನ, ಸೂರಜ್ ಹೊಸೂರು, ಗಿರೀಶ್ ಇತರರಿದ್ದರು.
ನಾಪೋಕ್ಲು: ಸಂಪಾಜೆಯಲ್ಲಿ 20 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ನೂತನ ವಿದ್ಯುತ್ ಪ್ರಸರಣ ಕೇಂದ್ರದ ಸ್ಥಾಪನೆಗೆ ಭೂಮಿ ಪೂಜೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಮಂಗಳವಾರ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು, ರಾಜ್ಯ ಸರ್ಕಾರದ ವಿಶೇಷ ಅನುದಾನದಲ್ಲಿ ಈ ಭಾಗದ ಸಂಪಾಜೆ, ಚೆಂಬು ಸುತ್ತಮುತ್ತಲಿನ ಪ್ರದೇಶಗಳ ವಿದ್ಯುತ್ ಪೂರೈಕೆ, ವೋಲ್ಟೇಜ್ ಸಮಸ್ಯೆ ಹಾಗೂ ವಿದ್ಯುತ್ ಮೂಲಸೌಕರ್ಯವನ್ನು ಮತ್ತಷ್ಟು ಗುಣಮಟ್ಟದ ವಿದ್ಯುತ್ ಪೂರೈಸಲು ಈ ಕಾಮಗಾರಿ ಪೂರ್ಣಗೊಂಡಂತೆ ಸಾಧ್ಯವಾಗಲಿದೆ. ರೈತರ ಕೃಷಿ ಚಟುವಟಿಕೆಗೆ ಹಾಗೂ ಇಲ್ಲಿ ಸ್ಥಾಪಿಸುವ ಲಘು ಉದ್ಯಮಗಳಿಗೂ ಇದು ಸಹಕಾರಿಯಾಗಲಿದೆ ಎಂದರು.
ಪಂಚಾಯಿತಿ ಮಾಜಿ ಅಧ್ಯಕ್ಷ ರಮಾದೇವಿ ಕಳಗಿ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೌಕತ್ ಆಲಿ, ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕನ್ಯಾನ, ಮಾಜಿ ಅಧ್ಯಕ್ಷ ಇಸ್ಮಾಯಿಲ್ ಹಾಗೂ ಪ್ರಮುಖರಾದ ಸೂರಜ್ ಹೊಸೂರು, ಕೊಲ್ಯದ ಗಿರೀಶ್, ಕಾಂಗ್ರೆಸ್ ಪಕ್ಷದ ಪ್ರಮುಖರು ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.