ಹೆಚ್. ಶಿವರಾಮೇಗೌಡ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕುಶಾಲನಗರದಲ್ಲಿ ನಡೆಯಿತು. ಬಿ.ಎ. ದಿನೇಶ್, ಗೋವಿಂದ ರಾಜ್ ಮತ್ತಿತರರು ಇದ್ದರು. 
ಕೊಡಗು

ಹೆಚ್. ಶಿವರಾಮೇಗೌಡ ಕರವೇ ಪದಾಧಿಕಾರಿಗಳ ಪದಗ್ರಹಣ

ಸುನಿಲ್ ಪೊನ್ನೇಟಿ

ಪ್ರಮುಖ ಮುಖ್ಯಾಂಶಗಳು

  • ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎ. ದಿನೇಶ್
  • ಸಂಘಟನೆಯ ಬಗ್ಗೆ ಹಗುರವಾಗಿ ಮಾತನಾಡಿದರೆ ಕಾನೂನು ಕ್ರಮದ ಎಚ್ಚರಿಕೆ
  • ಎಲ್ಲರೂ ಕನ್ನಡ ಭಾಷೆಯನ್ನು ಉಳಿಸಲು, ಬೆಳೆಸಲು ಶ್ರಮಿಸ ಬೇಕು
ಕುಶಾಲನಗರ:
ನಮ್ಮ ಸಂಘಟನೆಯ ಬಗ್ಗೆ ಕೆಲವರು ಅವಹೇಳನಕಾರಿಯಾಗಿ ವೇದಿಕೆಗಳಲ್ಲಿ ಮಾತನಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಕನ್ನಡ ಭಾಷೆ, ಕನ್ನಡದ ಹೆಸರು ಯಾರೊಬ್ಬರ ಸ್ವತ್ತೂ ಅಲ್ಲ ಎಂದು ಹೆಚ್. ಶಿವರಾಮೇಗೌಡ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎ. ದಿನೇಶ್ ಹೇಳಿದರು. ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಬುಧವಾರ ಇಲ್ಲಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಪದಾಧಿಕಾರಿಗಳು, ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕರವೇ ಹೆಸರು ನಮ್ಮ ಸಂಘಟನೆಯದ್ದು. ಇನ್ನೊಮ್ಮೆ ನಮ್ಮ ಸಂಘಟನೆಯ ಬಗ್ಗೆ ಹಗುರವಾಗಿ ಮಾತನಾಡಿದರೆ ಅಂತವರ ವಿರುದ್ಧ ಕಾನೂನು ರೀತಿಯಲ್ಲಿ ಉತ್ತರ ನೀಡಲಾಗುತ್ತದೆ. ನಾಡು, ನುಡಿ, ನೆಲ, ಜಲ ರಕ್ಷಣೆ ನಮ್ಮ ಕರುನಾಡಿನ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ ಆಗಿದೆ. ನಮ್ಮ ತಾಯಿ ನುಡಿ ಯಾವುದೇ ಇರಲಿ ಕನ್ನಡ ಮಣ್ಣಿನಲ್ಲಿ ಹುಟ್ಟಿ ಇಲ್ಲಿ ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡ ಭಾಷೆಯನ್ನು ಉಳಿಸಲು, ಬೆಳೆಸಲು ಶ್ರಮಿಸ ಬೇಕು. ಕನ್ನಡಕ್ಕೆ, ಕರ್ನಾಟಕಕ್ಕೆ ಅನ್ಯಾಯವಾದರೆ ಕೈ ಕಟ್ಟಿಕೊಂಡು ಕುಳಿತು ಕೊಳ್ಳುವ ಜಾಯಮಾನ ನಮ್ಮದಲ್ಲ. ಅಂಥವರ ವಿರುದ್ಧ ಸಂಘಟನೆಯ ಶಕ್ತಿಯಿಂದ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸಂಘಟನೆಯ ಜಿಲ್ಲಾ ಸಂಚಾಲಕ ಗೋವಿಂದ ದಾಸ್, ಸಂಘಟನೆಯ ಜಿಲ್ಲಾ ಪ್ರಮುಖರು, ತಾಲೂಕು ಪ್ರಮುಖರು ಇದ್ದರು.