ಸಮಗ್ರ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಹೇಶ್ ಕುಮಾರ್ ಮಾತನಾಡಿದರು. ಡಾ.ಹರೀಶ್, ಡಾ.ಸೌಮ್ಯಶ್ರೀ ಇತರರಿದ್ದರು.
- ಪೊಲೀಸ್ ಸಿಬ್ಬಂದಿಗೆ ತಪಾಸಣಾ ಶಿಬಿರ
ಮಡಿಕೇರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ಜಿಲ್ಲೆಯ ವತಿಯಿಂದ ವಿರಾಜಪೇಟೆ ಗ್ರಾಮಾಂತರ ಹಾಗೂ ಪಟ್ಟಣ ಪೊಲೀಸ್ ಠಾಣೆಗಳ ಸಿಬ್ಬಂದಿಗಾಗಿ ಎಚ್‌ಐವಿ, ಸಿಪಿಲಿಸ್, ಕ್ಷಯರೋಗ, ವೈರಲ್ ಹೆಪಟೈಟಿಸ್, ಅಸಾಂಕ್ರಾಮಿಕ ರೋಗಗಳು ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಒಳಗೊಂಡ ಸಮಗ್ರ ಆರೋಗ್ಯ ತಪಾಸಣಾ ಶಿಬಿರ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮವನ್ನು ವಿರಾಜಪೇಟೆ ಡಿವೈಎಸ್‌ಪಿ ಮಹೇಶ್ ಕುಮಾರ್ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಅನುಪ್ ಮಾದಪ್ಪ ಅವರು ಉದ್ಘಾಟಿಸಿದರು. ಶಿಬಿರದಲ್ಲಿ ಪೊಲೀಸ್ ಸಿಬ್ಬಂದಿಗೆ ಎಚ್‌ಐವಿ, ಸಿಪಿಲಿಸ್, ಕ್ಷಯರೋಗ, ವೈರಲ್ ಹೆಪಟೈಟಿಸ್, ಅಸಾಂಕ್ರಾಮಿಕ ರೋಗಗಳು ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಿ, ಅಗತ್ಯ ಆರೋಗ್ಯ ಸಲಹೆ, ಆರೋಗ್ಯ ಶಿಕ್ಷಣ ಹಾಗೂ ಜಾಗೃತಿ ಮೂಡಿಸಲಾಯಿತು.
ಇದೇ ಸಂದರ್ಭದಲ್ಲಿ MAS-MOBILISATION AIDS SURAKSHA ಕಾರ್ಯಕ್ರಮದ ಕುರಿತು ಜಾಗೃತಿ ಮೂಡಿಸಿ, ಸಾರ್ವಜನಿಕರಲ್ಲಿ ಡಿಜಿಟಲ್ ಸೇವೆಗಳ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಕಿಖ ಕೋಡ್ ಪೋಸ್ಟರ್ ಅನ್ನು ಶಿಬಿರದಲ್ಲಿ ಪ್ರದರ್ಶಿಸಲಾಯಿತು. ಈ ಕುರಿತು ಐಸಿಟಿಸಿ ಆಪ್ತಸಮಾಲೋಚಕರಾದ ಚಿಟ್ಟಿಯಪ್ಪ ಹಾಗೂ ಚಂದ್ರಶೇಖರ್, ಸರ್ಕಾರಿ ಆಸ್ಪತ್ರೆ ವಿರಾಜಪೇಟೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಗೋಣಿಕೊಪ್ಪ ಅವರು ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ವೈದ್ಯಾಧಿಕಾರಿ ಡಾ.ಸೌಮ್ಯಶ್ರೀ ಹಾಗೂ ಐಸಿಟಿಸಿ (ಚರ್ಮರೋಗ ತಜ್ಞರು), ಸರ್ಕಾರಿ ಆಸ್ಪತ್ರೆ ವಿರಾಜಪೇಟೆ, ಡಾ.ಹರೀಶ್, ಡಾ.ಅರ್ಚನಾ, ಉಪ ನಿರೀಕ್ಷಕ ಪ್ರಮೋದ್ ಹಾಗೂ ಲತಾ, ಐಸಿಟಿಸಿ ಆಪ್ತ ಸಮಾಲೋಚಕರಾದ ಚಿಟ್ಟಿಯಪ್ಪ ಹಾಗೂ ಚಂದ್ರಶೇಖರ್, ಎಸ್‌ಟಿಎಸ್ ವಿನಿಲ್ ಉಪಸ್ಥಿತರಿದ್ದರು. ವಿವಿಧ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.