ಕನ್ನಡ ಭವನದ ವತಿಯಿಂದ ನೀಡಲಾಗುವ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್-2026ಗೆ ಭಾಜನರಾಗಿರುವ ಸಮುದಾಯದ ಸಾಧಕರನ್ನು ಕೊಡಗು ಜಿಲ್ಲಾ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಲಾಯಿತು. ಬಿ.ಡಿ. ಜಗದೀಶ್ ರೈ, ರವೀಂದ್ರ ವಿ. ರೈ, ರತ್ನಾಕರ ರೈ, ಬಿ.ಬಿ. ಐತಪ್ಪ ರೈ, ಸದಾನಂದ ರೈ ಮತ್ತಿತರರು ಇದ್ದರು. 
ಕೊಡಗು

ಪ್ರಶಸ್ತಿಗೆ ಭಾಜನರಾದವರಿಗೆ ಸನ್ಮಾನ

ಸುನಿಲ್ ಪೊನ್ನೇಟಿ
ಮಡಿಕೇರಿ:
ಕನ್ನಡ ಭವನದ ವತಿಯಿಂದ ನೀಡಲಾಗುವ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್-2026ಗೆ ಭಾಜನರಾಗಿರುವ ಸಮುದಾಯದ ಸಾಧಕರನ್ನು ಕೊಡಗು ಜಿಲ್ಲಾ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಈಚೆಗೆ ಸನ್ಮಾನಿಸಿ ಗೌರವಿಸಲಾಯಿತು. ಮಡಿಕೇರಿಯ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಬಂಟರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿಗೆ ಭಾಜನರಾದ ಉಪನ್ಯಾಸಕಿ ಪ್ರತಿಮಾ ಹರೀಶ್ ರೈ, ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು, ನಿರೂಪಕಿ ಹರ್ಷಿತಾ ಶೆಟ್ಟಿ ಅವರನ್ನು ಅತಿಥಿಗಳು ಸನ್ಮಾನಿಸಿ, ಅಭಿನಂದಿಸಿದರು. ಜಿಲ್ಲೆಯ ಹೆಸರಾಂತ ಚಿತ್ರ ಕಲಾವಿದ ಬಿ.ಕೆ. ಗಣೇಶ್ ರೈ ಅವರನ್ನೂ ಸನ್ಮಾನಿಸಿ ಅಭಿನಂದಿಸಲಾಯಿತು.
ಕೊಡಗು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ. ಜಗದೀಶ್ ರೈ, ಕಾರ್ಯದರ್ಶಿ ರವೀಂದ್ರ ವಿ. ರೈ, ಖಜಾಂಚಿ ರತ್ನಾಕರ ರೈ, ಗೌರವಾಧ್ಯಕ್ಷ ಬಿ.ಬಿ. ಐತಪ್ಪ ರೈ, ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸದಾನಂದ ರೈ ಮತ್ತಿತರರು ಈ ಸಂದರ್ಭ ಇದ್ದರು.
ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮದ ಪ್ರಯುಕ್ತ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಭಾನುವಾರ (ಜ.18) ಕಾಸರಗೋಡಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.