ಕೊಡಗು ಜಿಲ್ಲಾ ಬ್ಯೂಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌAಡ್ ಮೈದಾನದಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಉದ್ಘಾಟಿಸಿದರು. ವನಿತಾ ಚಂದ್ರಮೋಹನ್. ರತ್ನಯತೀಶ್, ಮಿನಾಜ್ ಪ್ರವೀಣ್, ಪವಿತ್ರ ರೈ, ಚೇತನಾ ಮತ್ತಿತರರು ಇದ್ದರು. 
ಕೊಡಗು

ನಿತ್ಯ ವ್ಯಾಯಾಮದೊಂದಿಗೆ ಆರೋಗ್ಯ ವೃದ್ಧಿಸಿಕೊಳ್ಳಬೇಕು

ಸುನಿಲ್ ಪೊನ್ನೇಟಿ
ಮಡಿಕೇರಿ:
ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಹೇಳಿದರು. ಕೊಡಗು ಜಿಲ್ಲಾ ಬ್ಯೂಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌAಡ್ ಮೈದಾನದಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಇತರರ ಸೌಂದರ್ಯದ ಬಗ್ಗೆ ಕಾಳಜಿ ವಹಿಸುವ ಸೌಂದರ್ಯ ತಜ್ಞರು ಕಳೆದ ಮೂರು ವರ್ಷಗಳಿಂದ ತಾವುಗಳು ಪಾಲ್ಗೊಂಡು ಕ್ರೀಡಾ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಜಿಲ್ಲಾ ಬ್ಯೂಟಿಶಿಯನ್ ಅಸೋಸಿಯೇಷನ್ ಸಂಸ್ಥಾಪಕರು ಹಾಗೂ ಗೌರವಾಧ್ಯಕ್ಷೆ ವನಿತಾ ಚಂದ್ರಮೋಹನ್ ಮಾತನಾಡಿ, ಕ್ರೀಡೆ ಮೂಲಕ ಪರಸ್ಪರ ಬಾಂಧವ್ಯ ಬೆಳೆಯಲು ಸಾಧ್ಯ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ ಹೊರತು ಗೆಲುವು ಮುಖ್ಯವಲ್ಲ. ಒಗ್ಗಟ್ಟಿನ ಮೂಲಕ ಪ್ರತಿಯೊಬ್ಬರು ಸಂಘದಲ್ಲಿ ಚರ್ಚಿಸಿ ತಮ್ಮ ಸಮಸ್ಯೆಗೆ ಪರಿಹಾರ ಹುಡುಕುವ ಕೆಲಸವಾಗಬೇಕು ಎಂದು ಹೇಳಿದರು.
ಜಿಲ್ಲಾ ಅಧ್ಯಕ್ಷೆ ರತ್ನ ಯತೀಶ್ ಕ್ರೀಡಾಕೂಟಕ್ಕೆ ಶುಭ ಕೋರಿ ಮಾತನಾಡಿ ಸಂಘಟನೆಯ ಬಲವರ್ಧನೆಗೆ ಪ್ರತಿಯೊಬ್ಬರೂ ಕೈಜೋಡಿಸುವಂತೆ ಮನವಿ ಮಾಡಿದರು.
ತಾಲೂಕು ಸಂಘಗಳ ತಂಡಗಳ ನಡುವೆ ಥ್ರೋ ಬಾಲ್, ಹಗ್ಗ ಜಗ್ಗಾಟ, ಶಾಟ್ ಪುಟ್, ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.
ಸಂಘದ ಉಪಾಧ್ಯಕ್ಷೆ ಮಿನಾಜ್ ಪ್ರವೀಣ್, ಪ್ರಧಾನ ಕಾರ್ಯದರ್ಶಿ ಪವಿತ್ರ ರೈ, ಚೇತನಾ, ಸಂಘಟನಾ ಕಾರ್ಯದರ್ಶಿ ಸಂಧ್ಯಾ ರಂಜನ್, ಖಜಾಂಚಿ ವೈಭವಿ ಸಹ ಖಜಾಂಚಿ ತಾಜ್, ತಾಲೂಕು ಅಧ್ಯಕ್ಷರುಗಳಾದ ಝಾನ್ಸಿರಾಜ್, ಪ್ರತಿಮಾ ನಾಗಮಣಿ, ಸುಮಿತ ವಾಸು, ನವ್ಯಾ, ಸರಿತಾ ಈಶ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು.