ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆ ಅಡಿಯಲ್ಲಿ ನಗರದ ಪೌರ ಕಾರ್ಮಿಕರಿಗಾಗಿ ನಿರ್ಮಿಸಲಾಗುತ್ತಿರುವ ಮನೆಗಳ ಕಾಮಗಾರಿಯನ್ನು ನಗರಸಭೆ ಅಧ್ಯಕ್ಷೆ ಪಿ. ಕಲಾವತಿ ಮತ್ತು ಉಪಾಧ್ಯಕ್ಷ ಮಹೇಶ್ ಜೈನಿ ವೀಕ್ಷಿಸಿದರು. ಸಹಾಯಕ ಕಾರ್ಯಪಾಲಕ ಅಭಿಯಂತರ ಸತೀಶ್ ಇದ್ದರು.
ಪೌರ ಕಾರ್ಮಿಕರ ಗೃಹ ಭಾಗ್ಯ ಯೋಜನೆ ಅಡಿಯಲ್ಲಿ ನಗರದ ಪೌರ ಕಾರ್ಮಿಕರಿಗಾಗಿ 12 ಮನೆಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.
ಮಡಿಕೇರಿಯ ಮೆಡಿಕಲ್ ಕಾಲೇಜು ಬಳಿ ನಗರಸಭೆ ವತಿಯಿಂದ ಈ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಮನೆಗಳ ನಿರ್ಮಾಣ ಕಾರ್ಯದ ಪ್ರಗತಿಯನ್ನು ಮಡಿಕೇರಿ ನಗರಸಭೆ ಅಧ್ಯಕ್ಷೆ ಪಿ. ಕಲಾವತಿ ಮತ್ತು ಉಪಾಧ್ಯಕ್ಷ ಮಹೇಶ್ ಜೈನಿ ಮಂಗಳವಾರ ವೀಕ್ಷಿಸಿದರು. ಈ ಸಂದರ್ಭ ಸಹಾಯಕ ಕಾರ್ಯಪಾಲಕ ಅಭಿಯಂತರ ಸತೀಶ್ ಹಾಜರಿದ್ದು ಮಾಹಿತಿ ನೀಡಿದರು.