ಪೊನ್ನಂಪೇಟೆ: ಪ್ರಗತಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಆಟೋ ಚಾಲಕರಿಗೆ ಕಾರ್ಮಿಕ ಕಾರ್ಡ್ ವಿತರಣೆ ಮಾಡಲಾಯಿತು.
ಪೊನ್ನಂಪೇಟೆ: ಪ್ರಗತಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಆಟೋ ಚಾಲಕರಿಗೆ ಕಾರ್ಮಿಕ ಕಾರ್ಡ್ ವಿತರಣೆ ಮಾಡಲಾಯಿತು.
ಗೋಣಿಕೊಪ್ಪ ಪಂಚಾಯಿತಿ ಹಳೇ ಕಟ್ಟಡ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 90ಕ್ಕೂ ಹೆಚ್ಚು ಆಟೋ ಚಾಲಕರಿಗೆ ವಿತರಿಸಲಾಯಿತು. ಮಡಿಕೇರಿ ಕಾರ್ಮಿಕ ಇಲಾಖೆ ಅಧಿಕಾರಿ ವಾಣಿ ಮಾಹಿತಿ ನೀಡಿದರು. ಸಾಹಿತಿ ಜಗದೀಶ್ ಜೋಡುಬೀಟಿ, ಪ್ರಗತಿ ಆಟೋ ಚಾಲಕರ ಸಂಘದ ಗೌರವಾಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಸಂಘದ ಅಧ್ಯಕ್ಷ ಡಾಡು ಜೋಸೆಫ್, ಉಪಾಧ್ಯಕ್ಷ ವಿನೋದ್, ಕಾರ್ಯದರ್ಶಿ ಸನ್ನು ಕಾರ್ಯಪ್ಪ, ಖಜಾಂಚಿ ಪ್ರಕಾಶ್, ನಿಕಟಪೂರ್ವ ಅಧ್ಯಕ್ಷ ಭೀಮಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ, ಪೊನ್ನಂಪೇಟೆ ಕಾರ್ಮಿಕ ಇಲಾಖೆ ಅಧಿಕಾರಿ ಕಾವ್ಯಾ ಇತರರು ಇದ್ದರು.