ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ ಭಾಗವಾಗಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತ್ ಮಟ್ಟದ ಕೆಡಿಪಿ ಸಭೆ ನಡೆಯಿತು. ಅಧ್ಯಕ್ಷೆ ಸೌಮ್ಯ, ಉಪಾಧ್ಯಕ್ಷ ಪ್ರವೀಣ್, ಸದಸ್ಯರು, ಕಾರ್ಯದರ್ಶಿ ಕುಮಾರಸ್ವಾಮಿ ಇದ್ದರು. 
ಕೊಡಗು

ಗ್ರಾ.ಪಂ. ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದ ಸಮಸ್ಯೆಗಳು

ಪ್ರಮುಖ ಮುಖ್ಯಾಂಶಗಳು

  • ಗುಡ್ಡೆಹೊಸೂರು ಗ್ರಾ.ಪಂ. ಕೆಡಿಪಿ ಸಭೆ
  • ಗ್ರಾ.ಪಂ. ಅಧ್ಯಕ್ಷೆ ಸೌಮ್ಯ ಅಧ್ಯಕ್ಷತೆಯಲ್ಲಿ ಸಭೆ
  • ವಿವಿಧ ಇಲಾಖೆ ಅಧಿಕಾರಿಗಳು ಭಾಗಿ
ಕುಶಾಲನಗರ:
ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ ಭಾಗವಾಗಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದ ಕೆಡಿಪಿ ಸಭೆ ಗುಡ್ಡೆಹೊಸೂರು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಸೋಮವಾರ ನಡೆಯಿತು. ಗ್ರಾಮ ಪಂಚಾಯತ್ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿ ಸಭೆಗೆ ತಮ್ಮ ತಮ್ಮ ಇಲಾಖೆಗಳಿಗೆ ಸಂಬAಧಿಸಿದ ಮಾಹಿತಿ ನೀಡಿದರು.
ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತಿದ್ದು ಪ್ರತಿ ಮೊಟ್ಟೆಗೆ 5.30 ರೂ ನಿಗದಿಪಡಿಸಿದ್ದು ಮಾರುಕಟ್ಟೆ ದರ ಜಾಸ್ತಿ ಇರುವುದರಿಂದ ಯೋಜನೆಯ ಅನುಷ್ಠಾನದಲ್ಲಿ ಆಗುತ್ತಿರುವ ಸಮಸ್ಯೆಯ ಬಗ್ಗೆ ಬಸವನಹಳ್ಳಿ ಪ್ರೌಢಶಾಲಾ ಶಿಕ್ಷಕ ಮಹೇಂದ್ರ ವಿಷಯ ಪ್ರಸ್ತಾಪ ಮಾಡಿದರು. ಗ್ರಾಮ ಪಂಚಾಯಿತಿ ವತಿಯಿಂದ ಈಗಾಗಲೇ ತಮ್ಮ ಶಾಲೆಗೆ ಸುಸಜ್ಜಿತ ಶೌಚಾಲಯ, ಆವರಣ ಗೋಡೆ, ಹಾಗೂ ಸಭಾಭವನಕ್ಕೆ ಇಂಟರ್ಲಾಕ್ ಅಳವಡಿಕೆ ಮಾಡಿ ಕೊಟ್ಟಿದ್ದು, ಸರ್ಕಾರದಿಂದ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
ಕಾವೇರಿ ನೀರಾವರಿ ನಿಗಮದ ಕಿರಿಯ ಅಭಿಯಂತರ ಕಿರಣ್ ಮಾತನಾಡಿ ತಮ್ಮ ವ್ಯಾಪ್ತಿಯ ನಾಲೆಗಳ ಸ್ವಚ್ಛತಾ ಕಾರ್ಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಸರ್ಕಾರದಿಂದ ಅನುದಾನ ಬಿಡುಗಡೆಯಾದ ತಕ್ಷಣವೇ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭ ಬಸವನಹಳ್ಳಿ ಹಾಗೂ ಮಾದಾಪಟ್ಟಣ ಗ್ರಾಮಗಳಲ್ಲಿ ನಾಲೆಗಳಿಂದ ಗ್ರಾಮದ ಜನರಿಗೆ ಯಾವುದೇ ಉಪಯೋಗವಿಲ್ಲ ಹಾಗಾಗಿ ನಾಲೆಗಳನ್ನು ಮುಚ್ಚುವಂತೆ ಗ್ರಾಮ ಪಂಚಾಯತ್ ಸದಸ್ಯರು ಆಗ್ರಹಿಸಿದರು
ಹಾಲು ಉತ್ಪಾದಕರಿಗೆ ಕಳೆದ ಆರು ತಿಂಗಳಿAದ ಪ್ರೋತ್ಸಾಹ ಧನ ಬಿಡುಗಡೆ ಆಗಿಲ್ಲ ಎಂದು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು ಸಭೆಯಲ್ಲಿ ಮಾಹಿತಿ ನೀಡಿದರು. ಪಶುಪಾಲನಾ ಇಲಾಖೆಯ ವೈದ್ಯಾಧಿಕಾರಿಗಳು ಮಾತನಾಡಿ ಈಗಾಗಲೇ ಕಾಲುಬಾಯಿ ಜ್ವರಕ್ಕೆ ಸಂಬAಧಿಸಿದAತೆ, ಚಿಕಿತ್ಸೆ ನೀಡಲಾಗುತ್ತಿದ್ದು ನಾಯಿ ಮತ್ತು ಬೆಕ್ಕುಗಳಿಗೆ ಉಚಿತವಾಗಿ ರೇಬಿಸ್ ಲಸಿಕೆಯನ್ನು ನೀಡಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗಪಡಿಸಿಕೊಳ್ಳಬೇಕೆಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾತನಾಡಿ ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಮಾದಾಪಟ್ಟಣ ಗ್ರಾಮದ ಗೋಮಾಳ ಜಾಗ ಅತಿಕ್ರಮಣವಾಗುತ್ತಿದ್ದು ಈ ಅತಿಕ್ರಮಣವನ್ನು ತೆರವುಗೊಳಿಸಿ, ಗೋಮಾಳವನ್ನು ಉಳಿಸುವಂತೆ ಗ್ರಾಮ ಆಡಳಿತ ಅಧಿಕಾರಿ ಸಂತೋಷ್ ಅವರನ್ನು ಆಡಳಿತ ಮಂಡಳಿ ಸದಸ್ಯರು ಆಗ್ರಹಿಸಿದರು
ಈಗಾಗಲೇ ಪ್ರಸ್ತಾವನೆ ಬಂದಿರುವ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ಅರಣ್ಯ ಇಲಾಖೆಯಿಂದ ತೆರವುಗೊಳಿಸಲಾಗಿದ್ದು, ಇಲಾಖೆಯಿಂದ ಲಭ್ಯವಿರುವ ಇತರ ಯೋಚನೆಗಳ ಮಾಹಿತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ನೀಡಿದರು. ಬಸವನಹಳ್ಳಿ ಸರ್ವೆ ನಂಬರ್ 1/1 ಸರ್ಕಾರಿ ಬಡಾವಣೆ ಹಾಗೂ ಬಸವನಹಳ್ಳಿ ಮುರಾರ್ಜಿ ಶಾಲೆ ಹಾಗೂ ಗುಡ್ಡೆ ಹೊಸೂರು ಪ್ರಾಥಮಿಕ ಶಾಲಾ ಆವರಣಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಕ್ರಮ ಪಂಚಾಯಿತಿ ಅಧ್ಯಕ್ಷರು ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸದ್ಯದಲ್ಲಿ ಜೇನು ಕುರುಬರ ಸರ್ವೆ ಕಾರ್ಯ ನಡೆಯಲಿದೆ ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.
ಈ ಸಂದರ್ಭ ಪಂಚಾಯಿತಿಯಿAದ ಸಂಜೀವಿನಿ ಸಂತೆಯನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ ಇಲಾಖೆಗಳು ಸಾರ್ವಜನಿಕರಿಗೆ ಮಾಹಿತಿ ನೀಡಲು ಬಯಸಿದರೆ ಈ ಸಂಜೀವಿನಿ ಸಂತೆಯಲ್ಲಿ ಪ್ರತ್ಯೇಕ ಮಳಿಗೆಗಳನ್ನು ನೀಡುವುದಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮೇಶ್ ತಿಳಿಸಿದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪ್ರವೀಣ್ ಆಡಳಿತ ಮಂಡಳಿ ಸದಸ್ಯರು, ಕಾರ್ಯದರ್ಶಿ ಕುಮಾರಸ್ವಾಮಿ ಇದ್ದರು.