ವಿರಾಜಪೇಟೆಯ ಸೇಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್, ಯುವ ರೆಡ್ ಕ್ರಾಸ್ ಘಟಕಗಳನ್ನು ಗಣ್ಯರು ಉದ್ಘಾಟಿಸಿದರು. ಆಂಟೋನಿ ರಾಬಿನ್, ರೆ.ಫಾ. ಮದಲೈ ಮುತ್ತು, ತೃಪ್ತಿ ಬೋಪಣ್ಣ, ಹೇಮಾ, ಶಾಂತಿ ಭೂಷಣ್, ವಿಲೀನಾ ಇತರರು ಇದ್ದರು.
ಸೇವೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವಂತಹದ್ದು. ನಿಸ್ವಾರ್ಥ ಸೇವೆಯು ಸದಾ ಜನ ಮಾನಸದಲ್ಲಿ ಉಳಿಯುತ್ತದೆ ಎಂದು ಉದ್ಯಮಿ ಆಂಟೊನಿ ರಾಬಿನ್ ಅಭಿಪ್ರಾಯಪಟ್ಟರು.
ಪಟ್ಟಣದ ಸೇಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಎನ್‌ಎಸ್‌ಎಸ್, ಯುವ ರೆಡ್ ಕ್ರಾಸ್ ಘಟಕಗಳ ಉದ್ಘಾಟನಾ ಸಮಾರಂಭ ಹಾಗೂ ಘಟಕಗಳ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಸ್ತು ಮೈಗೂಡಿಸಿಕೊಳ್ಳಬೇಕು. ನಾಯಕತ್ವ ಬೆಳೆಸಿಕೊಳ್ಳಬೇಕು. ಆಗ ಮಾದರಿ ಪ್ರಜೆಗಳಾಗಿ ಬಾಳಲು ಸಾಧ್ಯ. ಈಗಿನಿಂದಲೇ ಸೇವಾ ಮನೋಭಾವನೆ ಮೂಡಿಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಿ ಎಂದು ಕರೆ ನೀಡಿದರು.
ಕಾಲೇಜಿನ ವ್ಯವಸ್ಥಾಪಕ ರೆ.ಫಾ. ಮದಲೈ ಮುತ್ತು ಮಾತನಾಡಿ, ಸೇವೆಯಿಂದ ಆತ್ಮತೃಪ್ತಿ ದೊರಕುತ್ತದೆ. ಎನ್‌ಎಸ್‌ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಸಾಮಾಜಿಕ ಕಳಕಳಿಯು ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಸಮಾಜದಲ್ಲಿ ಇರುವಂತಹ ಸಮಸ್ಯೆಗಳನ್ನು ಹೋಗಲಾಡಿಸುವ ಪ್ರಯತ್ನ ಮಾಡಬೇಕು ಎಂದರು.
ಕಾಲೇಜಿನ ಐಕ್ಯುಎಸಿ ಸಂಚಾಲಕಿ ಬಿ.ಡಿ. ಹೇಮಾ, ಎನ್‌ಎಸ್‌ಎಸ್ ಘಟಕಾಧಿಕಾರಿ ಬಿ.ಎನ್. ಶಾಂತಿಭೂಷಣ್ ಮಾತನಾಡಿದರು. ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ವಿಶೇಷ ಶಿಬಿರದಲ್ಲಿ ಭಾಗವಹಿಸಿದ್ದ ಸ್ವಯಂ ಸೇವಕರಿಗೆ ಅತಿಥಿಗಳು ಪ್ರಮಾಣ ಪತ್ರ ವಿತರಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ವಿಲೀನ ಗೋನ್ಸಾಲ್ವೆಸ್, ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.