ಸೋಮವಾರಪೇಟೆ ಜೇಸಿಐ ಪುಷ್ಪಗಿರಿ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ವಲಯ ಅಧ್ಯಕ್ಷ ಪ್ರಜ್ವಲ್ ಎಸ್ ಜೈನ್ ಉದ್ಘಾಟಿಸಿದರು. ಜಗತ್, ಮಂಜುಳಾ, ಜಗದಾಂಬ ಇದ್ದರು.
- ವಲಯ 14ರ ಅಧ್ಯಕ್ಷ ಪ್ರಜ್ವಲ್ ಎಸ್ ಜೈನ್ ಹೇಳಿಕೆ
ಸೋಮವಾರಪೇಟೆ: ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಸಂಸ್ಥೆಯ 2026ರ ಪದಗ್ರಹಣ ಕಾರ್ಯಕ್ರಮ ಇತ್ತೀಚೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು.
ವಲಯ 14ರ ಅಧ್ಯಕ್ಷ ಪ್ರಜ್ವಲ್ ಎಸ್ ಜೈನ್ ಪದಗ್ರಹಣ ನೆರವೇರಿಸಿದರು. ನಂತರ ಅವರು ಮಾತನಾಡಿ, ಜೇಸಿ ಸಂಸ್ಥೆ ಯುವಕರಲ್ಲಿ ನಾಯಕತ್ವ, ಸೇವಾಭಾವನೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಪ್ರಮುಖ ವೇದಿಕೆಯಾಗಿದ್ದು, ಸಮಾಜಮುಖಿ ಚಟುವಟಿಕೆಗಳ ಮೂಲಕ ಉತ್ತಮ ನಾಯಕರನ್ನು ರೂಪಿಸುತ್ತದೆ. ತರಬೇತಿ, ಕಾರ್ಯಾಗಾರಗಳು ಹಾಗೂ ಸೇವಾ ಯೋಜನೆಗಳು ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಹೊಣೆಗಾರಿಕೆಯನ್ನು ಬೆಳೆಸುತ್ತವೆ ಎಂದರು.
ನಾಯಕತ್ವ ಗುಣಗಳು ಸಮಾಜದ ಅಭಿವೃದ್ಧಿಗೆ ಅಗತ್ಯವಾಗಿದ್ದು, ಜೇಸಿ ಅದಕ್ಕೆ ಸೂಕ್ತ ಅವಕಾಶ ನೀಡುತ್ತಿದೆ ಎಂದು ಹೇಳಿದರು. ಈ ಸಂದರ್ಭ ವಲಯ ಉಪಾಧ್ಯಕ್ಷ ಬಿ.ಎಂ. ಜಗತ್, ನಿಕಟಪೂರ್ವ ಅಧ್ಯಕ್ಷೆ ಜಗದಾಂಬ ಗುರುಪ್ರಸಾದ್, ನೂತನ ಸಾಲಿನ ಅಧ್ಯಕ್ಷೆ ಮಂಜುಳಾ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಜ್ಯೋತಿ ರಾಜೇಶ್, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಜ, ಖಜಾಂಚಿ ಪವಿತ್ರ ಲಕ್ಷ್ಮೀಕುಮಾರ್, ಜೂನಿಯರ್ ಜೇಸಿ ಅಧ್ಯಕ್ಷೆ ಭಾವನ್ಯಾ ಸೇರಿದಂತೆ ಪದಾಧಿಕಾರಿಗಳು ಇದ್ದರು.