ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯು ಪಲ್ಸ್ ಪೋಲಿಯೋ ಅಭಿಯಾನಕ್ಕೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ಸಜೇಶ್ ಚಾಲನೆ ನೀಡಿದರು.
ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ಸಜೇಶ್ ಹೇಳಿಕೆ
ವಿರಾಜಪೇಟೆ: ಪಟ್ಟಣದ ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯು ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಪಾಲ್ಗೊಂಡಿದ್ದು ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಲಸಿಕಾ ಅಭಿಯಾನವನ್ನು ಭಾನುವಾರ ಆಯೋಜಿಸಲಾಗಿತ್ತು.
ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ಜತೆಗೆ ನಮ್ಮ ವಿದ್ಯಾಸಂಸ್ಥೆಯು ಕೂಡ ಈ ಅಭಿಯಾನಕ್ಕೆ ಸಂಪೂರ್ಣ ಸಹಕಾರ ನೀಡಿ ಪಾಲ್ಗೊಂಡಿದೆ. ಸಂಸ್ಥೆಯು ಸಮುದಾಯದ ಸಹಭಾಗಿತ್ವದೊಂದಿಗೆ ಆರೋಗ್ಯಯುಕ್ತ ರಾಷ್ಟ್ರದ ನಿರ್ಮಾಣಕ್ಕೆ ಕೈ ಜೋಡಿಸಿದೆ ಎಂದು ಹೇಳಿದರು.
ಆರೋಗ್ಯ ಇಲಾಖೆ ಸಿಬ್ಬಂದಿ, ಲಿಟಲ್ ಸ್ಕಾಲರ್ಸ್ ಅಕಾಡೆಮಿ ಸಿಬ್ಬಂದಿ, ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಮಗ್ಗುಲ ಹಾಗೂ ವಿರಾಜಪೇಟೆ ವ್ಯಾಪ್ತಿಯ ಒಟ್ಟು ಐದು ಪಲ್ಸ್ ಪೋಲಿಯೋ ಲಸಿಕಾ ಬೂತ್‌ನಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಆಡಳಿತ ಮಂಡಳಿಯವರು, ಶಿಕ್ಷಕರು ಹಾಗೂ ಸಿಬ್ಬಂದಿ ಸ್ವಯಂ ಸೇವಕರಾಗಿ ಪಾಲ್ಗೊಂಡರು.