ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಲಾಜಾಥಾ ವಿಶೇಷ ಪ್ರಚಾರಾಂದೋಲನಕ್ಕೆ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಚಾಲನೆ ನೀಡಿದರು. ಚಿನ್ನಸ್ವಾಮಿ, ಈ. ರಾಜು, ಭೀಮರಾಯ, ಹೇಮಂತ್ ರಾಜ್ ಮತ್ತಿತರರು ಇದ್ದರು.
ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಲಾಜಾಥಾ ವಿಶೇಷ ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷಿö್ಮ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಸೇರಿದಂತೆ ಸರ್ಕಾರದ ಹಲವು ವಿಷಯಗಳ ಕುರಿತು ವಿಶೇಷ ಪ್ರಚಾರಾಂದೋಲನವನ್ನು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಒಂದಲ್ಲ ಒಂದು ರೀತಿಯಲ್ಲಿ ಜನರಿಗೆ ತಲುಪುತ್ತಿದ್ದು, ಈ ಯೋಜನೆಗಳ ಮಹತ್ವ ಕುರಿತು ಕಲಾಜಾಥಾ ಮೂಲಕ ವಿಶೇಷ ಪ್ರಚಾರಾಂದೋಲನ ಆಯೋಜಿಸಲಾಗಿದೆ ಎಂದರು.
ಕಲಾವಿದ ಈ. ರಾಜು ಮತ್ತು ತಂಡದವರು ಯೋಜನೆ ಬಂತಣ್ಣ. ಗ್ಯಾರಂಟಿ ಯೋಜನೆ ಬಂತಣ್ಣ.. ಮಹಿಳೆಯರ ಪಾಲಿಗೆ ದಾರಿ ದೀಪವಣ್ಣ, ಬಡವರ ಮುಖದಲ್ಲಿ ನಗೆ ಮೂಡಿತಣ್ಣ... ಹಾಡು ಹಾಡುವ ಮೂಲಕ ಗಮನ ಸೆಳೆದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಭೀಮರಾಯ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಹೇಮಂತ್ ರಾಜ್, ಇತರರು.