ಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳು ಹಾಗೂ ಗಣ್ಯರು . 
ಕೊಡಗು

ಕಳತ್ ಮಾಡು ಲೈನ್ಸ್ ಪ್ರೌಢಶಾಲೆ ಪ್ರಥಮ

ಶಿವಶಂಕರ್ ಎಂ. ಹೆಬ್ಬಳ್ಳ

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮ
ನಾಪೋಕ್ಲು: ಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾ ಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ನೆರವಂಡ ಸೋಮಣ್ಣ ಬೊಳ್ಯವ್ವ ಜ್ಞಾಪಕಾರ್ಥ ಆಯೋಜಿಸಿದ್ದ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಒಟ್ಟು 14 ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ ಆರು ತಂಡಗಳು ಅಂತಿಮವಾಗಿ ಆಯ್ಕೆಯಾದರು. ಇದರಲ್ಲಿ ಕಳತ್ ಮಾಡು ಲೈನ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದರು. ದ್ವಿತೀಯ ಬಹುಮಾನವನ್ನು ನಾಪೋಕ್ಲುವಿನ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ತೃತೀಯ ಬಹುಮಾನವನ್ನು ನಾಪೋಕ್ಲುವಿನ ಎಕ್ಸೆಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಪಡೆದುಕೊಂಡರು.
ಮುಖ್ಯ ಅತಿಥಿಗಳಾಗಿ ಕುಂಬಳದಾಳು ಗ್ರಾಮಸ್ಥ ನೇರವಂಡ ಮುತ್ತಪ್ಪ , ಮೂರ್ನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ, ಖಜಾಂಚಿಗಳಾದ ವಿ.ಎ.ಯತೀಶ್, ನಿರ್ದೇಶಕ ಪುದಿಯೋಕ್ಕಡ ಹರೀಶ್ ದೇವಯ್ಯನವರು ಉಪಸ್ಥಿತರಿದ್ದರು.
ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಸಾಯನಶಾಸ್ತ್ರ ವಿಭಾಗದ ಉಪನ್ಯಾಸಕ ಪಿ.ಕೆ.ರವಿಶಂಕರ್ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಚೌರಿರ ಡಾ.ಜಗತ್ ತ್ತಿಮ್ಮಯ್ಯ ಅಧ್ಯಕ್ಷತೆ ವಹಿಸಿದ್ದರು.