ಕನ್ನಡ ಜಾಗೃತಿ ಸಮಿತಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ಅವರು ಕನ್ನಡ ಭಾ?ೆಯ ಅಭಿವೃದ್ಧಿ, ಅನು?್ಠಾನ ಮತ್ತು ಜಾಗೃತಿ ಕುರಿತು ಕನ್ನಡ ಜಾಗೃತಿ ಸಮಿತಿ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು.
- ನಾಮಫಲಕದಲ್ಲಿ ಶೇ.೬೦ ರಷ್ಟು ಕನ್ನಡ ಕಡ್ಡಾಯ
- ಕನ್ನಡ ಜಾಗೃತಿ ಸಮಿತಿ ಸಭೆಯಲ್ಲಿ ಡಾ.ಸಹನಾ ಎಸ್.ಹಾದಿಮನಿ
ಮಡಿಕೇರಿ: ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.೬೦ ರ?್ಟು ಕನ್ನಡ ಭಾ?ೆ ಕಡ್ಡಾಯವಾಗಿ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಕನ್ನಡ ಜಾಗೃತಿ ಸಮಿತಿ ಸಭೆಯಲ್ಲಿ ಕನ್ನಡ ಭಾ?ೆಯ ಅಭಿವೃದ್ಧಿ, ಅನು?್ಠಾನ ಮತ್ತು ಜಾಗೃತಿ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು.
ಕನ್ನಡ ಅತ್ಯಂತ ಪ್ರಾಚೀನ ಮತ್ತು ಶ್ರೀಮಂತ ಭಾ?ೆಯಾಗಿದ್ದು, ಮುಂದಿನ ದಿನಗಳಲ್ಲಿ ಕನ್ನಡದ ಭವಿ?್ಯವನ್ನು ಮತ್ತ?್ಟು ಉಜ್ವಲಗೊಳಿಸಲು ಕನ್ನಡ ಜಾಗೃತಿ ಸಮಿತಿಯ ಜವಾಬ್ದಾರಿಗಳು ಅತ್ಯಂತ ನಿರ್ಣಾಯಕ. ಆ ಹಿನ್ನೆಲೆಯಲ್ಲಿ ಕನ್ನಡ ಜಾಗೃತಿ ಸಮಿತಿ ಆಧುನಿಕ ಜಗತ್ತಿಗೆ ಕನ್ನಡವನ್ನು ಕೊಂಡೊಯ್ಯುವ ಮಾರ್ಗದರ್ಶಿ ಸಮಿತಿಯಾಗಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಕನ್ನಡ ಭಾ?ೆ ಸಮಗ್ರ ಅಭಿವೃದ್ಧಿ ಸಂಬಂಧ ಈಗಾಗಲೇ ಅಧಿನಿಯಮ ಜಾರಿಯಾಗಿದ್ದು, ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲೆಯ ಗಡಿಭಾಗ ಸೇರಿದಂತೆ ನಗರ, ಪಟ್ಟಣ ಹಾಗೂ ಎಲ್ಲೆಡೆ ಅಳವಡಿಸಿರುವ/ ಅಳವಡಿಸುವ ನಾಮಫಲಕದಲ್ಲಿ ಕಡ್ಡಾಯವಾಗಿ ಶೇ.೬೦ ರ?್ಟು ಕನ್ನಡ ಭಾ?ೆಗೆ ಪ್ರಥಮ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಳ ಗಮನಕ್ಕೆ ತಂದು ಸ್ಥಳೀಯ ಸಂಸ್ಥೆ ಮೂಲಕ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಮಾತನಾಡಿ, ಈಗಾಗಲೇ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಹಲವು ಸಭೆಗಳನ್ನು ಮಾಡಲಾಗಿದ್ದು, ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಕನ್ನಡ ಜಾಗೃತಿ ಸಮಿತಿ ಸದಸ್ಯ ಬಿ.ಎಸ್.ಲೋಕೇಶ್ ಸಾಗರ್ ಮಾತನಾಡಿ, ಸರ್ಕಾರಿ ಬಸ್ಸು ಸೇರಿದಂತೆ ಇತರ ಭಾ?ೆಗಳಲ್ಲಿ ಜಾಹೀರಾತು ಅಳವಡಿಸಲಾಗುತ್ತಿದ್ದು, ಅದು ಕನ್ನಡದಲ್ಲೇ ಅಳವಡಿಸುವಂತಾಗಬೇಕು. ಅಲ್ಲದೇ ಶಾಲಾ-ಕಾಲೇಜುಗಳಲ್ಲಿ ನಾಡಗೀತೆ ಮತ್ತು ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಹಾಡಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ಮಾಡಿದರು.
ಮತ್ತೋರ್ವ ಸದಸ್ಯ ಅಮಿನ್ ಮೋಯಿಸಿನ್ ಮಾತನಾಡಿ, ಕೊಡಗಿನಲ್ಲಿ ಸಾಕ?್ಟು ಮಂದಿ ಕನ್ನಡಕ್ಕಾಗಿ ತಮ್ಮದೇ ಆದ ಕೊಡುಗೆ ನೀಡಿದವರಿದ್ದಾರೆ. ಅಲ್ಲದೇ ವಿವಿಧ ಪ್ರಶಸ್ತಿಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅಂತಹ ಸಾಧಕರನ್ನು ಹಾಗೂ ಕೊಡಗಿನ ಮೂಲ ಸಂಸ್ಕೃತಿಯನ್ನು ಬಿಂಬಿಸುವ ಚಿತ್ರಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಸಂಗ್ರಹಾಲಯ ತೆರೆಯಬೇಕು. ಈ ನಿಟ್ಟಿನಲ್ಲಿ ಸಂಗ್ರಹಾಲಯಕ್ಕೆ ಮಡಿಕೇರಿಯಲ್ಲಿ ಜಾಗ ಗುರುತಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮಾತನಾಡಿ, ಜಿಲ್ಲೆಯ ಸರ್ಕಾರಿ ವೆಬ್‌ಸೈಟ್‌ನಲ್ಲಿ ಸಾಧಕರ ಕೊಡುಗೆ ಪರಿಚಯಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೇ ಪ್ರವಾಸಿ ತಾಣ ರಾಜಸೀಟಿನಲ್ಲಿ ಪ್ರವಾಸಿಗರ ಗಮನ ಸೆಳೆಯಲು ಕೊಡಗಿನ ಸಂಸ್ಕೃತಿ ಪ್ರತಿಬಿಂಬಿಸುವ ಕಲಾಚಿತ್ರಗಳನ್ನು ಹಾಗೂ ಸಾಧಕರ ಫೋಟೋ ಅಳವಡಿಸಲು ಕ್ರಮ ಕೈಗೊಳ್ಳುವ ಕುರಿತು ಸಂಬಂಧಿಸಿದವರೊಂದಿಗೆ ಚರ್ಚಿಸಲಾಗುವುದು. ಸಂಗ್ರಹಾಲಯ ನಿರ್ಮಾಣಕ್ಕೆ ಯೋಜನೆ ರೂಪಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕನ್ನಡ ಜಾಗೃತಿ ಸಮಿತಿ ಸದಸ್ಯ ಕೆ.ವಿ.ಸುನಿಲ್ ಕುಮಾರ್ ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಕನ್ನಡ ಸಂಬಂಧಿಸಿದ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.
ಕನ್ನಡ ಜಾಗೃತಿ ಸಮಿತಿ ಸದಸ್ಯ ಕುಮಾರ್ ಮಾತನಾಡಿ, ಪ್ರೌಢಶಾಲೆ ಹಾಗೂ ಕಾಲೇಜು ಹಂತದ ವಿದ್ಯಾರ್ಥಿಗಳಿಗೆ ಪ್ರಬಂಧ, ರಸಪ್ರಶ್ನೆ, ಚಿತ್ರಕಲೆ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನವನ್ನು ನೀಡುವುದರ ಮೂಲಕ ಪ್ರೋತ್ಸಾಹಿಸುವ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಸದಸ್ಯರಾದ ಡಾ.ರಾಧಿಕ ಕುಟ್ಟಪ್ಪ ಮಾತನಾಡಿ, ಕನ್ನಡ ಭಾಷೆ ಸಂಸ್ಕೃತಿ ಕುರಿತು ಕಾರ್ಯಗಾರ ಏರ್ಪಡಿಸಬೇಕು. ಶಾಲಾ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಕ ಹಲವು ಕಾರ್ಯಕ್ರಮ ಆಯೋಜಿಸಬೇಕು ಎಂದು ಸಲಹೆ ಮಾರ್ಗದರ್ಶನ ನೀಡಿದರು.