ಕನ್ನಡ ರಾಜ್ಯೋತ್ಸವ ಅಂಗವಾಗಿ ಸುಪ್ರಜ ಗುರುಕುಲ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕನ್ನಡ ರಸಪ್ರಶ್ನೆ ಸ್ಪರ್ದೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು.
- ಭಾಷೆ, ಸಾಹಿತ್ಯ, ನಾಡು ನುಡಿ, ಕೊಡಗು ಜಿಲ್ಲೆಯ ಬಗ್ಗೆ ಕುರಿತಾದ ಕನ್ನಡ ರಸಪ್ರಶ್ನೆ ಸ್ಪರ್ಧೆ
ಶನಿವಾರಸಂತೆ : ಕರ್ನಾಟಕ ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕ ಮತ್ತು ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗುರುವಾರ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಭಾಷೆ, ಸಾಹಿತ್ಯ, ನಾಡು ನುಡಿ, ಕೊಡಗು ಜಿಲ್ಲೆಯ ಬಗ್ಗೆ ಕುರಿತಾದ ಕನ್ನಡ ರಸಪ್ರಶ್ನೆ ಸ್ಪರ್ಧೆಯನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.
ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕದ ಅಧ್ಯಕ್ಷೆ ಮತ್ತು ವಿದ್ಯಾಸಂಸ್ಥೆ ಪ್ರಾಂಶುಪಾಲೆ ಡಿ.ಸುಜಲಾದೇವಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ರಾಜ್ಯದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಕರ್ನಾಟಕದ 8 ಜನರಿಗೆ ಜ್ಞಾನಪೀಠ ಪ್ರಶಸ್ತಿ ಲಭಿಸಿದ್ದು ಈ ಮೂಲಕ ಕರ್ನಾಟಕ ದೇಶದಲ್ಲಿ ಅತ್ಯಂತ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡ ರಾಜ್ಯ ಎಂಬ ಹೆಗ್ಗಳಿಕೆ ಪಾತ್ರವಾಗಿದೆ ಎಂದು ಹೇಳಿದರು.
ಜಾನಪದ ಪರಿಷತ್ ಘಟಕದ ಸದಸ್ಯ ಮತ್ತು ಹಿರಿಯ ಪತ್ರಕರ್ತ ಭಾಸ್ಕರ್ ಮುಳ್ಳೂರು, ಶಾಲಾ ಶಿಕ್ಷಕರು ಹಾಜರಿದ್ದರು. ವಿವಿಧ ಶಾಲಾ ಮಕ್ಕಳು ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.