ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಶನಿವಾರ ಆಯೋಜಿಸಿದ್ದ ಕಾಫಿ ತೋಟಗಳ ಮಾಲೀಕರ ಸಭೆಯಲ್ಲಿ ಠಾಣಾಧಿಕಾರಿ ಮೋಹನ್‌ರಾಜ್ ಮಾತನಾಡಿದರು.  
ಕೊಡಗು

ಹೊರರಾಜ್ಯದ ಕಾರ್ಮಿಕರ ಮೇಲೆ ನಿಗಾವಹಿಸಿ

ಪ್ರಮುಖ ಮುಖ್ಯಾಂಶಗಳು

  • ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್‌ರಾಜ್ ಸೂಚನೆ
ಸುಂಟಿಕೊಪ್ಪ: ಸುಂಟಿಕೊಪ್ಪ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಹೊರ ರಾಜ್ಯಗಳ ಕೂಲಿ ಕಾರ್ಮಿಕರ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಕಾಫಿ ಬೆಳೆಗಾರರಿಗೆ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್‌ರಾಜ್ ಸೂಚಿಸಿದರು.
ಸುಂಟಿಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ತೋಟಗಳ ಮಾಲೀಕರು ಹಾಗೂ ವ್ಯವಸ್ಥಾಪಕರೊಂದಿಗೆ ಶನಿವಾರ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಹೊರ ರಾಜ್ಯಗಳಿಂದ ಕೂಲಿ ಕೆಲಸಕ್ಕೆ ಆಗಮಿಸಿ ತೋಟದ ಲೈನ್‌ಮನೆಗಳಲ್ಲಿ ನೆಲೆಸಿರುವ ಕಾರ್ಮಿಕರ ಸಂಪೂರ್ಣ ಮಾಹಿತಿಯ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ಒದಗಿಸಬೇಕು. ಅವರ ಮೇಲೆ ನಿಗಾ ವಹಿಸಬೇಕು. ಅವರ ನಡಾವಳಿಕೆಗಳಲ್ಲಿ ಸಂಶಯಗಳು ಮೂಡಿಬಂದಲ್ಲಿ ಕೂಡಲೇ ಪೊಲೀಸ್‌ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಿದರು.