ಪತ್ರಿಕಾಗೋಷ್ಠಿಯಲ್ಲಿ ಮಹೇಶ್ ತಿಮ್ಮಯ್ಯ, ನಿತಿನ್,ಜಿಲ್ಲಾ ಕಾರ್ಯದರ್ಶಿ ಅನಂತ್ ಕುಮಾರ್ ಹಾಜರಿದ್ದರು.  
ಕೊಡಗು

22 ರಂದು ಕೆಸರುಗದ್ದೆ ಕ್ರೀಡಾಕೂಟ

ಪ್ರಮುಖ ಮುಖ್ಯಾಂಶಗಳು

  • ಯುವಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಮಾಹಿತಿ

ಶನಿವಾರಸಂತೆ: ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿ ಸೋಮವಾರಪೇಟೆ ತಾಲೂಕು ಯುವ ಮೋರ್ಚಾ ವತಿಯಿಂದ ಪ್ರಥಮ ವರ್ಷದ ಗ್ರಾಮೀಣ ಕೆಸರುಗದ್ದೆ ಕ್ರೀಡಾಕೂಟವು ಆ.22ರಂದು ಗುಡುಗಳಲೆಯಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ಸೋಮವಾರಪೇಟೆ ತಾಲೂಕು ಯುವಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆ22ರಂದು ಸೋಮವಾರಪೇಟೆ ತಾಲೂಕು ಯುವಮೋರ್ಚಾ ವತಿಯಿಂದ ಗುಡುಗಳಲೆಯ ಗದ್ದೆಯಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಗ್ರಾಮೀಣ ಕೆಸರುಗದ್ದೆ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದ್ದು ಪುರುಷರಿಗೆ ಕೆಸರುಗದ್ದೆ ವಾಲಿಬಾಲ್,ಹಗ್ಗ ಜಗ್ಗಾಟ ಸ್ಪರ್ಧೆ, ಹಾಗೂ ಮಹಿಳೆಯರಿಗೆ ಕೆಸರುಗದ್ದೆ ತ್ರೋಬಾಲ್ ಮತ್ತು ಕೆಸರುಗದ್ದೆ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಕ್ರೀಡಾಕೂಟದಕ್ಕೆ ಸಂಸದ ತೇಜಸ್ವಿ ಸೂರ್ಯ,
ಕಾರ್ಯಕ್ರಮಕ್ಕೆ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಧೀರಜ್ ಮುನಿರಾಜು ಮತ್ತು ರಾಜ್ಯದ ಬಿಜೆಪಿ ಮುಖಂಡರುಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಕ್ರೀಡಾಕೂಟ ಸಮಿತಿ ಅಧ್ಯಕ್ಷ ನಿತಿನ್,ಜಿಲ್ಲಾ ಕಾರ್ಯದರ್ಶಿ ಅನಂತ್ ಕುಮಾರ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್, ರೈತ ಯುವ ಮೋರ್ಚಾ ಉಪಾಧ್ಯಕ್ಷ ರಕ್ಷಿತ್, ಯುವ ಮೋರ್ಚಾ ಉಪಾಧ್ಯಕ್ಷ ಅನಿಲ್ ಹಾಜರಿದ್ದರು.