ಸೋಮವಾರಪೇಟೆ ಅಂಬೇಡ್ಕರ್ ಭವನದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ತಾಲೂಕು ಘಟಕದ ವಾರ್ಷಿಕ ಮಹಾಸಭೆಯಲ್ಲಿ ಕಿಕ್ ಬಾಕ್ಸಿಂಗ್‌ನಲ್ಲಿ ಬೆಳ್ಳಿಯ ಪದಕ ಪಡೆದಿರುವ ಮಿತೇಶ್ ಹಾಗೂ ರಿತನ್ ಅವರನ್ನು ಸನ್ಮಾನಿಸಲಾಯಿತು. ರಾಜು, ಜ್ಯೋತಿ, ಗೋವಿಂದ, ಅಣ್ಣಯ್ಯ ಇದ್ದರು.
ಸೋಮವಾರಪೇಟೆ: ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ತಾಲೂಕು ಘಟಕದ ವಾರ್ಷಿಕ ಮಹಾಸಭೆ ನಡೆಯಿತು.
ಸಮಿತಿ ಅಧ್ಯಕ್ಷ ಸಂತೋಷ್ ಮಾತನಾಡಿ, ಸಮಾಜಸೇವೆಯನ್ನು ಮಾಡುತ್ತಿರುವ ರಕ್ಷಣಾ ವೇದಿಕೆ, ಇನ್ನಷ್ಟು ಸೇವೆಯೊಂದಿಗೆ, ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಕಿಕ್ ಬಾಕ್ಸಿಂಗ್‌ನಲ್ಲಿ ಬೆಳ್ಳಿಯ ಪದಕ ಪಡೆದಿರುವ ಸೋಮವಾರಪೇಟೆ ಜಿಎಂಪಿ ಶಾಲಾ ವಿದ್ಯಾರ್ಥಿಗಳಾದ ಮಿತೇಶ್ ಹಾಗೂ ರಿತನ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ವೇದಿಕೆ ಜಿಲ್ಲಾಧ್ಯಕ್ಷ ಕೆ.ಪಿ.ರಾಜು, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಕುದುಪಜೆ, ಸಂಚಾಲಕ ಗೋವಿಂದ, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ, ಸೋಮವಾರಪೇಟೆ ಮಹಿಳಾ ಘಟಕದ ಅಧ್ಯಕ್ಷೆ ಆಶಾ ಇದ್ದರು.