ಸೋಮವಾರಪೇಟೆ ತಾಲೂಕಿನ ಕಿರಗಂದೂರು ಗ್ರಾಮದಲ್ಲಿ ಆಯೋಜಿಸಿದ್ದ ಮಕ್ಕಳ ಗ್ರಾಮ ಸಭೆಯಲ್ಲಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಇದ್ದರು.  
ಕೊಡಗು

ಕಿರಗಂದೂರು ಸರ್ಕಾರಿ ಶಾಲೆ ಸಿಸಿ ಕ್ಯಾಮರಾ ಅಳವಡಿಸಿ

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳ ಆಗ್ರಹ
ಸೋಮವಾರಪೇಟೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರಿನ ಸಿಎಂಸಿಎ ಸಂಸ್ಥೆ ಮತ್ತು ನಾವು ಪ್ರತಿಷ್ಠಾನ ಮೇಲ್ವಿಚಾರಣೆಯಲ್ಲಿ ಕಿರಗಂದೂರು ಗ್ರಾಮ ಪಂಚಾಯಿತಿ ವತಿಯಿಂದ ಮಕ್ಕಳ ಗ್ರಾಮಸಭೆ ಕಿರಗಂದೂರು ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.
ಸಭೆಯಲ್ಲಿ ವಿದ್ಯಾರ್ಥಿಗಳು ತಮ್ಮ ಶಾಲೆಗಳಿಗೆ ಬೇಕಾದಂತಹ ಹಲವು ಸೌಲಭ್ಯಗಳ ಬಗ್ಗೆ ತಿಳಿಸಿದರು. ಸಿಸಿ ಕ್ಯಾಮರಾ, ವಿದ್ಯುತ್ ಸಮಸ್ಯೆ, ಬೀದಿ ನಾಯಿಗಳ ಹಾವಳಿ ಸೇರಿದಂತೆ ಹತ್ತು ಹಲವು ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಾದ ಕಾರ್ತಿಕ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಸಭೆ ಗಮನ ಸೆಳೆದರು.
ಸಭೆ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ಜನನಿ ವಹಿಸಿದ್ದಳು. ವೇದಿಕೆಯಲ್ಲಿ ಕಿರಗಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾರಾ ಸುಧೀರ್, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ಯಾಮಲಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾವಿತ್ರವ್ವ, ಮಕ್ಕಳ ಸಹಾಯವಾಣಿ ಇಲಾಖಾಧಿಕಾರಿ ಯೋಗೇಶ್, ನಾವು ಪ್ರತಿಷ್ಠಾನ ಸಂಸ್ಥಾಪಕರಾದ ಗೌತಮ್ ಕಿರಗಂದೂರು, ಸುಮನಾ, ವನಿತಾ, ಪೊನ್ನಪ್ಪ, ಪಂಚಾಯಿತಿ ಕಾರ್ಯದರ್ಶಿ ಕೃಷ್ಣಪ್ಪ, ದಾನಿಗಳಾದ ಪದ್ಮನಾಭ ಇದ್ದರು.