ನಾಪೋಕ್ಲು ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಕೊಂಡಿರ ನಾಣಯ್ಯ ಮಹಾಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ನಾಪೋಕ್ಲು: ಮಾಜಿ ಸೈನಿಕರ ಸಂಘದ ವತಿಯಿಂದ ಸದಸ್ಯರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿಡಲಾಗುವುದು. ಜತೆಗೆ ಸಮಸ್ಯೆಗಳನ್ನು ಪರಿಹರಿಸಲು ಸತತ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಕೊಂಡಿರ ನಾಣಯ್ಯ ಹೇಳಿದರು.
ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದ್ದ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಪೋಕ್ಲು ವ್ಯಾಪ್ತಿಯ ಮಾಜಿ ಸೈನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾ ಸಂಘದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಸಂಘದ ಸದಸ್ಯರಿ ವಾರ್ಷಿಕವಾಗಿ ಜರಗುವ ಸಭೆಗೆ ಹಾಜರಾಗದೆ ದೂರವೇ ಉಳಿಯುತ್ತಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಘದ ಬೆಳವಣಿಗೆಗೆ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ಸಂಘದ ಕಾರ್ಯದರ್ಶಿ ಕೇಟೋಳಿರ ಅಪ್ಪಚ್ಚ ವಾರ್ಷಿಕ ವರದಿ ಮಂಡಿಸಿದರು. ಸಭೆಯಲ್ಲಿ ಹಿರಿಯರಾದ ನಾಯಕಂಡ ಬೊಪಣ್ಣ, ಸಂಘದ ಉಪಾಧ್ಯಕ್ಷ ಅಪ್ಪುಮಣಿಯಡ ನಾಣಯ್ಯ, ಖಜಾಂಜಿ ಅಬ್ದುಲ್ ಕರೀಂ ಎಂ.ಎಲ್., ನಿರ್ದೇಶಕರಾದ ಬಾಲೆಯಡ ಸೋಮಯ್ಯ, ಪುಲ್ಲೆರ ಪಳಗಪ್ಪ, ಕಂಬೆಯಡ ಅಪ್ಪಣ್ಣ, ಅಮ್ಮಡ ಅಶೋಕ್, ಪಾಡಿಯಮ್ಮಡ ಅಪ್ಪನಮಯ್ಯ, ಮುಂಡೋಟಿರ ಪಾರ್ವತಿ, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.