ಹಾವೇರಿಯಲ್ಲಿ ಈಚೆಗೆ ಆಯೋಜಿಸಿದ್ದ 18ನೇ ಕನ್ನಡ ವಿಜ್ಞಾನ ಸಮ್ಮೇಳನದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ. ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ -2026 ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರದ ಗಣ್ಯರು ಈ ಸಂದರ್ಭ ಇದ್ದರು. 
ಕೊಡಗು

ಕೊಡಗು ವಿವಿ ಕುಲಪತಿಗೆ ಪ್ರಶಸ್ತಿ

ಮಡಿಕೇರಿ:
ಸ್ವದೇಶಿ ವಿಜ್ಞಾನ ಆಂದೋಲನ-ಕರ್ನಾಟಕ, ಚಾಮರಾಜನಗರ ವಿಶ್ವವಿದ್ಯಾಲಯ, ಚಾಮರಾಜನಗರ ಹಾಗೂ ಕೊಡಗು ವಿಶ್ವವಿದ್ಯಾಲಯ, ಕೊಡಗು ಇವರುಗಳ ಸಹಯೋಗದೊಂದಿಗೆ ಹಾವೇರಿ ವಿಶ್ವವಿದ್ಯಾಲಯ, ಹಾವೇರಿಯಲ್ಲಿ ಈಚೆಗೆ ಆಯೋಜಿಸಿದ್ದ 18ನೇ ಕನ್ನಡ ವಿಜ್ಞಾನ ಸಮ್ಮೇಳನದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ. ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ -2026 ನೀಡಿ ಗೌರವಿಸಲಾಯಿತು.
ಸರ್ಕಾರಿ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಮಿತಿಗಳು ಮತ್ತು ಮಿಷನ್‌ಗಳಲ್ಲಿ ಅಧ್ಯಕ್ಷರಾಗಿ ಹಾಗೂ ಸದಸ್ಯರಾಗಿ ಕಾರ್ಯನಿರ್ವಹಿಸಿ, ವಿಶ್ವ ಆಹಾರ ಸಂಸ್ಥೆ, ವಿಶ್ವ ಬ್ಯಾಂಕ್ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ಸಂಸ್ಥೆಗಳ ಯೋಜನೆಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರವಹಿಸಿದ್ದು, ಐವತ್ತಕ್ಕೂ ಅಧಿಕ ದೇಶಗಳಿಗೆ ಭೇಟಿ ನೀಡಿ ಜಾಗತಿಕ ಮಟ್ಟದಲ್ಲಿ ಕೃಷಿ ಮತ್ತು ಅಭಿವೃದ್ಧಿ ಕ್ಷೇತ್ರಗಳಿಗೆ ಅಮೂಲ್ಯ ಕೊಡುಗೆ ನೀಡಿದ್ದಲ್ಲದೆ ಕೃಷಿಕ್ಷೇತ್ರ ಮತ್ತು ತತ್ಸಂಬದ್ಧ ಸಂಶೋಧನಾ ಕಾರ್ಯಗಳಿಗೆ ನೀಡಿದ ಕೊಡುಗೆಗಾಗಿ ಈ ಪ್ರಶಸ್ತಿ ನೀಡಲಾಗಿದೆ ಎಂದು ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.